ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಲಾಖೆಯ ಸೂಚನೆ ಸರಿಯಲ್ಲ: ಹೊರಟ್ಟಿ

Last Updated 18 ಅಕ್ಟೋಬರ್ 2020, 14:46 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಅನುದಾನಿತ ಹಾಗೂ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಚುನಾವಣೆಯಲ್ಲಿ ಭಾಗವಹಿಸಬಾರದು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪದವೀಧರರೇ ಮತದಾರರು. ಆದ್ದರಿಂದ ಇಲಾಖೆಯ ಈ ಸೂಚನೆ ಸರಿಯಲ್ಲ, ಇದನ್ನು ವಾಪಸ್‌ ಪಡೆಯಬೇಕು ಎಂದು ವಿಧಾನಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ.

ಈ ಕುರಿತು ಅವರು ಭಾನುವಾರ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ ಅವರಿಗೆ ಪತ್ರ ಬರೆದಿದ್ದು ‘ಪದವೀಧರರು ಮತದಾರರಾಗಿರುತ್ತಾರೆ. ಅವರಲ್ಲಿ ಹೆಚ್ಚಿನ ಪಾಲು ಸರ್ಕಾರಿ ನೌಕರರು, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಕೆಲಸ ನಿರ್ವಹಿಸುವವರು ಆಗಿದ್ದಾರೆ. ಇವರಿಗೆ ಚುನಾವಣೆಯಲ್ಲಿ ಭಾಗವಹಿಸಬಾರದು ಎಂದು ಹೇಳುವುದರಿಂದ ಅವರ ಹಕ್ಕು ಕಸಿದುಕೊಂಡಂತೆ ಆಗುತ್ತದೆ. ಇದೇ ವಿಷಯಕ್ಕೆ ಸಂಬಂಧಿಸಿ ನ್ಯಾಯಾಲಯ ತಡೆಯಾಜ್ಞೆ ನೀಡಿದೆ’ ಎಂದು ತಿಳಿಸಿದ್ದಾರೆ.

ಇಲಾಖೆ ಮುಖ್ಯಸ್ಥರು ಕೂಡ ಇಂಥ ಸೂಚನೆಗಳನ್ನು ನೀಡದಂತೆ ಸೂಚನೆ ನೀಡಬೇಕು ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT