ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಯಾಟ್‌ಲೈಟ್‌ ಕರೆಗಳ ಮೇಲೆ ಇಲಾಖೆ ಕಣ್ಣು: ಬೊಮ್ಮಾಯಿ

Last Updated 5 ಸೆಪ್ಟೆಂಬರ್ 2019, 12:35 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಬೆಳಗಾವಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶಗಳಿಂದಲೂ ಸ್ಯಾಟ್‌ಲೈಟ್‌ ಕರೆಗಳನ್ನು ಮಾಡಲಾಗಿದೆ ಎನ್ನುವ ವಿಷಯ ನಮಗೆ ತಿಳಿದಿದ್ದು, ಗೃಹ ಇಲಾಖೆ ಇದರ ಮೇಲೆ ಕಣ್ಣು ಇಟ್ಟಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ‘ಮಂಗಳೂರಿನಿಂದಲೂ ಸ್ಯಾಟ್‌ಲೈಟ್‌ ಮೂಲಕ ಕರೆಗಳು ಹೋಗಿರುವುದು ಗೊತ್ತಾಗಿದೆ. ಈ ಕುರಿತು ಇಲಾಖೆ ನಿಗಾ ಇಟ್ಟಿದ್ದು, ವಿಚಾರಣೆ ಕೂಡ ನಡೆಯುತ್ತಿದೆ. ಈ ವಿಷಯದಲ್ಲಿ ಇಲಾಖೆ ಸಂಪೂರ್ಣವಾಗಿ ಹಿಡಿತಹೊಂದಿದೆ’ ಎಂದರು.

ಶಾಸಕ ಡಿ.ಕೆ. ಶಿವಕುಮಾರ್‌ ಬಂಧನದ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ಎರಡು ದಿನಗಳಿಂದ ಕೆಲವು ಊರುಗಳಲ್ಲಿ ಅಹಿತಕರ ಘಟನೆ ನಡೆಯುವ ಪ್ರಯತ್ನವನ್ನು ನಮ್ಮ ಅಧಿಕಾರಿಗಳು ತಡೆದಿದ್ದಾರೆ. ರಾಮನಗರ, ಕನಕಪುರದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ರಾಜ್ಯದಾದ್ಯಂತ ಎಚ್ಚರಿಕೆ ವಹಿಸಲಾಗಿದೆ’ ಎಂದರು.

ಶಿವಕುಮಾರ್‌ ಬಗ್ಗೆ ಎರಡೂವರೆ ವರ್ಷಗಳಿಂದ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಜಾರಿ ನಿರ್ದೇಶನಾಲಯ ಕೂಡ ತನಿಖೆ ಮಾಡುತ್ತಿದೆ. ಈ ವಿಷಯ ರಾಜಕೀಯ ಪ್ರೇರಿತ ಎಂದು ಆರೋಪ ಮಾಡುತ್ತಿರುವವರೇ ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದರು. ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT