ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವಾಜಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌: ವ್ಯಕ್ತಿ ಬಂಧನ

Published 9 ಜೂನ್ 2023, 15:35 IST
Last Updated 9 ಜೂನ್ 2023, 15:35 IST
ಅಕ್ಷರ ಗಾತ್ರ

ಕುಂದಗೋಳ: ಸಾಮಾಜಿಕ ಜಾಲತಾಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಅವಹೇಳನಕಾರಿ ಸಂದೇಶ ಹಾಕಿದ್ದ ಯುವಕನನ್ನು ಬಂಧಿಸಿರುವ ಪೊಲೀಸರು, ಯುವಕನ ವಿರುದ್ಧ ಕುಂದಗೋಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪಟ್ಟಣದಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕ್ರಮಕೈಗೊಂಡಿದ್ದಾರೆ.

ಪಟ್ಟಣದ ಕಾಳಿದಾಸ ನಗರದ ಶಿವು ಅರಳಿಕಟ್ಟಿ ಎಂಬಾತ, ಫೇಸ್‌ಬುಕ್‌ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಭಯೋತ್ಪಾದಕ ಮತ್ತು ಭಯೋತ್ಪಾದಕರ ಆರಾಧ್ಯ ದೈವ ಎಂದು ಜೂನ್‌ 6ರಂದು ಪೋಸ್ಟ್‌ ಹಾಕಿದ್ದ. ಈ ಪೋಸ್ಟ್‌ನಿಂದ ಯುವಕ ಹಿಂದೂ ಧರ್ಮಕ್ಕೆ ಮತ್ತು  ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳಿಗೆ ಅವಮಾನ ಮಾಡಿದ್ದಾನೆ ಎಂದು ಆರೋಪಿಸಿರುವ ಮರಾಠಾ ಸಮಾಜದ ಮುಂಖಡರಾದ ವಿಠ್ಠಲ ಗೋ ಚವ್ಹಾಣ, ಶಿವಾಜಿ ಮಹಾರಾಜರ ಅಭಿಮಾನಿಗಳು, ಯುವಕನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕುಂದಗೋಳ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.‌

ದೂರಿನನ್ವಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT