ಶುಕ್ರವಾರ, ಮೇ 14, 2021
31 °C

ಹುಬ್ಬಳ್ಳಿ: ಕರ್ತವ್ಯಕ್ಕೆ ಅಡ್ಡಿ: ಐವರು ಸಾರಿಗೆ ನೌಕರರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಸಾರಿಗೆ ನೌಕರರ ಮುಷ್ಕರ ಮಧ್ಯೆಯೂ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ, ವಿದ್ಯಾನಗರ ಠಾಣೆ ಪೊಲೀಸರು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಐವರು ಸಿಬ್ಬಂದಿಯನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿ ಗ್ರಾಮಾಂತರ ಘಟಕ–1ರ ನೌಕರರಾದ ನಾಗರಾಜ ಬೊಮ್ಮಣ್ಣವರ, ಶಿವಪ್ಪ ದ್ಯಾಮಣ್ಣವರ, ವಿನಾಯಕ ಕಲ್ಲಣ್ಣವರ, ಮಡಿವಾಳಪ್ಪ ಮದ್ದೂರು ಹಾಗೂ ಮಂಜುನಾಥ ಮಡಿವಾಳರ ಬಂಧಿತರು.

ಆರೋಪಿಗಳು ಏ. 14ರಂದು ಶ್ರೀನಗರ ಬಸ್ ನಿಲ್ದಾಣದ ಬಳಿ, ಬಸ್ ಚಾಲಕರನ್ನು ತಡೆದು ಕರ್ತವ್ಯಕ್ಕೆ ಹಾಜರಾಗದಂತೆ ಬೆದರಿಕೆ ಹಾಕಿದ್ದರು. ಈ ಕುರಿತು ಹುಬ್ಬಳ್ಳಿ ನಗರ ಸಾರಿಗೆ 1ನೇ ಘಟಕದ ವ್ಯವಸ್ಥಾಪಕರು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು