ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವಾ ಮನೋಭಾವ ಬೆಳೆಸಿಕೊಳ್ಳಿ: ಅರವಿಂದ ಬೆಲ್ಲದ

Last Updated 29 ಜೂನ್ 2022, 9:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಮನುಷ್ಯ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ತಮ್ಮ ದುಡಿಮೆಯ ಒಂದಷ್ಟು ಭಾಗವನ್ನು ಸಮಾಜಕ್ಕೆ ಯಾವುದಾದರೂ ರೂಪದಲ್ಲಿ ಕೊಡುಗೆಯಾಗಿ ನೀಡಬೇಕು. ಆಗ ಮಾತ್ರ ಬದುಕಿಗೆ ಸಾರ್ಥಕತೆ ಬರುತ್ತದೆ’ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆಹೊಸಬೆಳಕು ಮಹಿಳಾ ಮಂಡಳವುನವನಗರದ ಪರಿಮಳ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಹೊಸ ಬೆಳಕು ಮಹಿಳಾ ಮಂಡಳದ ಸದಸ್ಯರು ಮಕ್ಕಳ ಬಾಳಿನಲ್ಲಿ ಬೆಳಕು ಮೂಡಿಸುವ ಕಾರ್ಯಕ್ರಮ ಮಾಡುತ್ತಿರುವುದು ಸಂತಸ ತಂದಿದೆ. ಈ ರೀತಿಯ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮಂಡಳಗಳಿಗೆ ತಮ್ಮ ಕೈಲಾದ ಸಹಾಯ ಮಾಡಿ ಪ್ರೋತ್ಸಾಹಿಸಲಾಗುವುದು’ ಎಂದರು.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ 85ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹಾಗೂ ಉದ್ಯಮಿ ರಮೇಶ ಬಾಫಣ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ– ಧಾರವಾಡ ಮಹಾನಗರ ಬಿಜೆಪಿ ಅಧ್ಯಕ್ಷ ಸಂಜಯ ಕಪಟಕರ, ಮುಖಂಡರಾದ ಮಲ್ಲಿಕಾರ್ಜುನ ಹೊರಕೇರಿ, ವಿಜಯಾನಂದ ಶೆಟ್ಟಿ, ಬಸವರಾಜ ಗರಗ, ಚಂದ್ರಶೇಖರ ಮನಗುಂಡಿ, ಸುಜಾತಾ ಕಳ್ಳಿಮನಿ, ನಿರ್ಮಲಾ ಸುತ್ತಗಟ್ಟಿಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT