ಸೋಮವಾರ, ಮಾರ್ಚ್ 27, 2023
31 °C

ಅಭಿವೃದ್ಧಿಯೇ ಟೀಕಾಕರರಿಗೆ ಉತ್ತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವಲಗುಂದ: ತಾಲ್ಲೂಕಿನ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ. ಆದ್ದರಿಂದ ಯಾರೇ ಟೀಕಿಸಿದರೂ ಅವರಿಗೆ ಅಭಿವೃದ್ಧಿಯ ಮೂಲಕ ಉತ್ತರ ನೀಡುತ್ತೇನೆ ಎಂದು ಜವಳಿ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹೇಳಿದರು.

ತಾಲ್ಲೂಕಿನ ಜಾವುರ ಗ್ರಾಮ ಪಂಚಾಯ್ತಿ ಹಾಗೂ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ಲಿಮಿಟೆಡ್ ಸಂಯುಕ್ತ ಆಶ್ರಯದಲ್ಲಿ ವಿವಿಧ ಕಾಮಗಾರಿಗಳ ಅಡಿಗಲ್ಲು ಸಮಾರಂಭ ಹಾಗೂ ನವಗ್ರಾಮದ 4.18 ಎಕರೆಯಲ್ಲಿ ₹40.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ಹಾಗೂ ರೈತ ಉತ್ಪಾದಕರ ಕಂಪನಿ ಲಿಮಿಟೆಡ್ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ವಿರಕ್ತಿಮಠ ಸ್ವಾಮೀಜಿ, ಮೇಲಿಗರಿಗೌಡ ಪಾಟೀಲ, ಗುರುಶಾಂತಯ್ಯ ಹಿರೇಮಠ, ಕಲ್ಲನಗೌಡ್ರ, ಶಂಕ್ರಗೌಡ್ರ ಪಾಟೀಲ, ಮುತ್ತಣ್ಣ ಮಣಮಿ, ಚಂದ್ರು ಹುಲ್ಮನಿ, ಅಡವೆಪ್ಪ ಮನಮಿ, ಎಫ್‌ಪಿಒ ಅಧ್ಯಕ್ಷ ಗಂಗಾಧರ ಗಾಣಿಗೇರ, ಬಸಣ್ಣ ಬೆಳವಣಕಿ, ಕೃಷಿ ವಿ.ವಿ ಉಪಕುಲಪತಿ ಪಿ.ಎಲ್. ಪಾಟೀಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.