ಧಾರವಾಡ: ‘ಜಿಲ್ಲೆಯಲ್ಲಿ ಫೆ.10ರಂದು ಜಂತುಹುಳು ನಿವಾರಣಾ ದಿನ ಆಚರಿಸಲಾಗುತ್ತಿದೆ. 5.63 ಲಕ್ಷ ಮಕ್ಕಳಿಗೆ (19 ವರ್ಷದೊಳಗಿರುವರು) ಜಂತುಹುಳು ನಿವಾರಕ ಔಷಧ (ಅಲ್ಬೆಂಡಜೋಲ್ ಮಾತ್ರೆ) ನೀಡಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಹೇಳಿದರು.

ಆರೋಗ್ಯ ಇಲಾಖೆ ವತಿಯಿಂದ ಜಂತುಹುಳು ನಿವಾರಣಾ ದಿನಾಚರಣೆ ಕುರಿತು ಜನಜಾಗೃತಿ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಫೆ.10ರಂದು ತಲುಪದ ಮಕ್ಕಳಿಗೆ 16ರಂದು ‘ಮ್ಯಾಪ್ ಆ್ಯಪ್’ ಸುತ್ತಿನಲ್ಲಿ ಮಾತ್ರೆ ನೀಡಲಾಗುವುದು. ಆರೋಗ್ಯ ಇಲಾಖೆಯು ಶಾಲಾ ಶಿಕ್ಷಣ ಇಲಾಖೆ, ಪಿಯು ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೌಶಲ ಅಭಿವೃದ್ದಿ ಮತ್ತು ಉದ್ಯೋಗ ತರಬೇತಿ ಇಲಾಖೆ ಸಹಯೋಗದಲ್ಲಿ ಈ ಅಭಿಯಾನ ನಡೆಯಲಿದೆ’ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಂ.ಹೊನಕೇರಿ, ಆರ್ಸಿಎಚ್ಒ ಡಾ. ಸುಜಾತಾ ಹಸವಿಮಠ, ಪಶು ಪಾಲನಾ ಇಲಾಖೆ ಉಪನಿರ್ದೇಶಕ ಡಾ. ತೇಲಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಹು–ಧಾ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.