ಹುಬ್ಬಳ್ಳಿ: ಧರ್ಮಸ್ಥಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡದ (ಎಸ್ಐಟಿ) ರಚನೆ ‘ರಾಜಕೀಯ ಪ್ರೇರಿತ’ ಎಂಬ ಬಿಜೆಪಿಯವರ ಹೇಳಿಕೆ ಖಂಡನೀಯ’ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿರುವುದು ಎಷ್ಟು ನಿಜವೋ ಗೊತ್ತಿಲ್ಲ. ಈ ಕುರಿತ ಗೊಂದಲ ನಿವಾರಿಸಲು ಉತ್ತಮ ಅಧಿಕಾರಿಗಳಿರುವ ಎಸ್ಐಟಿ ರಚಿಸಲಾಗಿದೆ’ ಎಂದು ತಿಳಿಸಿದರು.

ವಿಷ ಪ್ರಾಶನ ಆರೋಪ,ದಾಖಲೆ ನೀಡಲಿ: ‘ಪಂಚಮಸಾಲಿ ಪೀಠದ ಸ್ವಾಮೀಜಿಗೆ ನೀಡುವ ಆಹಾರದಲ್ಲಿ ಯಾರು ವಿಷಪ್ರಾಶನ ಮಾಡಿದ್ದಾರೆ ಎಂಬುದನ್ನು ದಾಖಲೆ ಸಮೇತ ಶಾಸಕ ಅರವಿಂದ ಬೆಲ್ಲದ ಅವರು ಪೊಲೀಸರಿಗೆ ನೀಡಲಿ’ ಎಂದು ಸಚಿವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.