ಧಾರವಾಡ: ಬಿ.ಎಸ್ಸಿ ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು. ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಸಮಾನ ಮನಸ್ಕರ ವೇದಿಕೆ ಮತ್ತು ಗೆಳೆಯರ ಬಳಗದವರು ಜಿಲ್ಲಾಧಿಕಾರಿ ಕಚೇರಿಯ ಎದುರು ಧರಣಿ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಕಾರರು ‘ನ್ಯಾಯ ಬೇಕು‘ ಎಂದು ಘೋಷಣೆ ಕೂಗಿದರು. ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.

ಅದಿತ್ಯ ಅವರ ಕುಟುಂಬದಲ್ಲಿ ತಾಯಿ ಮತ್ತು ಒಬ್ಬ ಸಹೋದರಿ ಇದ್ದಾರೆ. ಆ ಕುಟುಂಬಕ್ಕೆ ಆದಿತ್ಯನೇ ಏಕೈಕ ಆಧಾರವಾಗಿದ್ದರು. ಆ ಕುಟುಂಬಕ್ಕೆ ಸರ್ಕಾರವು ₹ 50 ಲಕ್ಷ ಪರಿಹಾರ ನೀಡಬೇಕು. ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಪ್ರಕರಣದ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಮೋಹನ ರಾಮದುರ್ಗ, ಶಿವಾನಂದ ಕವಳಿ, ನಾಗರಾಜ ಹಂಗರಕಿ, ಮಲ್ಲಿಕಾರ್ಜುನ ಮಠಪತಿ, ಜ್ಯೋತಿ ಪತ್ತಾರ, ವಿಜಯ ನಾಗಮ್ಮನವರ, ಶಾಂತಾ ಪವಾರ ಪ್ರತಿಭಟನೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-24-2095510814

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.