ಧಾರವಾಡ: 2017–18ರಿಂದ ಈವರೆಗೆ ‘ಅಫಿಲಿಯೇಷನ್’ ಶುಲ್ಕಕ್ಕೆ ಶೇ 18 ಜಿಎಸ್ಟಿ ಲೆಕ್ಕ ಹಾಕಿ ಕಾಲೇಜುಗಳಿಂದ ವಸೂಲಿ ಮಾಡುವಂತೆ ವಿಶ್ವವಿದ್ಯಾಲಯಗಳಿಗೆ ಸರ್ಕಾರ ಸೂಚಿಸಿದೆ. ಕರ್ನಾಟಕ ವಿಶ್ವವಿದ್ಯಾಲಯ ಜಿಎಸ್ಟಿ ಪಾವತಿಸುವಂತೆ ಸಂಯೋಜಿತ ಕಾಲೇಜುಗಳಿಗೆ ಸುತ್ತೋಲೆ ಕಳಿಸಿದೆ.

ಎಂಟು ವರ್ಷಗಳ ಜಿಎಸ್ಟಿ ಪಾವತಿಸುವಂತೆ ಕಾಲೇಜು ಅಭಿವೃದ್ಧಿ ಮಂಡಳಿ (ಸಿಡಿಸಿ) ನಿರ್ದೇಶಕರು ಕಾಲೇಜುಗಳಿಗೆ ಸುತ್ತೋಲೆ ನೀಡಿದ್ಧಾರೆ. 2028–29ನೇ ಸಾಲಿನ ಸಂಯೋಜನೆ ಅಧಿಸೂಚನೆಗೂ ಮುನ್ನ ಮೂರು ಕಂತುಗಳಲ್ಲಿ ಜಮೆ ಮಾಡುವಂತೆ ತಿಳಿಸಿದ್ದಾರೆ.

‘ನಮ್ಮ ಕಾಲೇಜಿನ ಅಫಿಲಿಯೇಷನ್ ಶುಲ್ಕದ ಎಂಟು ವರ್ಷದ ಜಿಎಸ್ಟಿ ₹ 2 ಲಕ್ಷ ಕಟ್ಟುವಂತೆ ವಿಶ್ವವಿದ್ಯಾಲಯ ಸೂಚನೆ ನೀಡಿದೆ. ಶಿಕ್ಷಣ ಸಂಸ್ಥೆಗಳಿಗೆ ಜಿಎಸ್ಟಿ ವಿಧಿಸುವುದು ಸರಿಯಲ್ಲ. ಕೋರ್ಟ್ ಮೊರೆ ಹೋಗುತ್ತೇವೆ’ ಎಂದು ನಗರದ ಖಾಸಗಿ ಕಾಲೇಜಿನ ಪ್ರಾಚಾರ್ಯರೊಬ್ಬರು ತಿಳಿಸಿದರು.

‘ಅಫಿಲಿಯೇಷನ್ಗೆ ಜಿಎಸ್ಟಿ ವಿಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅದನ್ನು ಉಲ್ಲೇಖಿಸಿ ಸರ್ಕಾರಕ್ಕೆ ಪತ್ರ ಬರೆಯುತ್ತೇವೆ. ಜಿಎಸ್ಟಿ ಕೈಬಿಡುವಂತೆ ಮನವಿ ಮಾಡುತ್ತೇವೆ’ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎ.ಎಂ.ಖಾನ್ ತಿಳಿಸಿದರು.

‘ಕಾಲೇಜುಗಳ ಅಫಿಲಿಯೇಷನ್ (2021–22ನೇ ಸಾಲಿನ) ಶುಲ್ಕಕ್ಕೆ ಜಿಎಸ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು ಹೈಕೋರ್ಟ್ ಮೊರೆ ಹೋಗಿತ್ತು. ಜಿಎಸ್ಟಿ ವಿಧಿಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ಇದನ್ನು ಆಧರಿಸಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಜಿಎಸ್ಟಿ ಕೈಬಿಡುವಂತೆ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತರಿಗೆ ಮನವಿ ಸಲ್ಲಿಸಿದ್ದೆವು. ಅವರು 2021–22ಕ್ಕೆ ಸೀಮಿತವಾಗಿ ಕೈಬಿಡಲು ಒಪ್ಪಿದ್ದಾರೆ. ಆದರೆ, ಹೈಕೋರ್ಟ್ ಆದೇಶಕ್ಕೆ ಸಂಬಂಧಿಸಿದಂತೆ ವಾಣಿಜ್ಯ ತೆರಿಗೆ ಇಲಾಖೆಯವರು ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ಧಾರೆ’ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಪ್ರದೀಪ ಕುಮಾರ ‘ಪ್ರಜಾವಾಣಿ’ಗೆ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-28-2054212077

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.