ಧಾರವಾಡ: ಆಕಾಶವಾಣಿ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವನ್ನು ಬೆಂಗಳೂರಿಗೆ ಸ್ಥಳಾಂತರಿಸುವ ನಿರ್ಧಾರವನ್ನು ಕೈ ಬಿಡಬೇಕು ಎಂದು ಅಗ್ರಹಿಸಿ ಸೋಮವಾರ ಆಕಾಶವಾಣಿ ಕೇಂದ್ರದ ಎದುರು ಕರ್ನಾಟಕ ನವನಿರ್ಮಾಣ ಸೇನೆ ಜಿಲ್ಲಾ ಘಟಕದವರು ಪ್ರತಿಭಟನೆ ನಡೆಸಿದರು.

ಧಾರವಾಡ ಆಕಾಶವಾಣಿ ಕೇಂದ್ರವು ದಶಕಗಳಿಂದ ಉತ್ತರ ಕರ್ನಾಟಕದ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿನ ಸುದ್ದಿ ವಿಭಾಗವನ್ನು ಸ್ಥಳಾಂತರಿಸುವುದು ಈ ಭಾಗದ ಸಾಂಸ್ಕೃತಿಕ ಅಸ್ಮಿತೆಗೆ ಧಕ್ಕೆ ತರುತ್ತದೆ. ಕೂಡಲೇ ಆದೇಶವನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸರ್ಕಾರವು ಆಡಳಿತವನ್ನು ಜನರಿಗೆ ಹತ್ತಿರವಾಗಿಸಲು ವಿಕೇಂದ್ರೀಕರಣಕ್ಕೆಒತ್ತು ನೀಡಬೇಕು. ಎಲ್ಲವನ್ನೂ ಬೆಂಗಳೂರಿನಲ್ಲೇ ಕೇಂದ್ರೀಕೃತ ಮಾಡುವುದು ಪ್ರಾದೇಶಿಕ ಅಸಮತೋಲನಕ್ಕೆ ಕಾರಣವಾಗುತ್ತದೆ. ಧಾರವಾಡದ ಕೇಂದ್ರವು ಎಲ್ಲ ಮೂಲಸೌಕರ್ಯಗಳನ್ನು ಹೊಂದಿದ್ದು, ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ಆಡಳಿತಾತ್ಮಕ ಕಾರಣದಿಂದ ಸ್ಥಳಾಂತರ ಮಾಡುವುದು ಅವೈಜ್ಞಾನಿಕ ನಿರ್ಧಾರವಾಗಿದೆ ಎಂದರು.

ಕೂಡಲೇ ಸ್ಥಳಾಂತರ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು. ನಿರ್ಧಾರವನ್ನು ಹಿಂಪಡೆಯದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಂಘಟನೆ ಜಿಲ್ಲಾ ಉಪಾಧ್ಯಕ್ಷ ನಿಯಾಜ್ ಅಹ್ಮದ್ ನಿಪ್ಪಾಣಿ, ಲಕ್ಷ್ಮಣ ಬಕ್ಕಾಯಿ, ವಿನಾಯಕ, ಸಲಿಂ ಮುಲ್ಲಾ, ಎಸ್.ಎಂ. ರೋಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-24-916813405

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.