ಧಾರವಾಡ: ‘ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದಿಂದ ಏ. 5ರಂದು ಲಿಂಗಾಯತ ಭವನದಲ್ಲಿ ಅಕ್ಕಮಹಾದೇವಿ ಜಯಂತ್ಯುತ್ಸವ ಹಾಗೂ ಮಹಿಳಾ ದಿನಾಚರಣೆ ಆಯೋಜಿಸಲಾಗಿದೆ’ ಎಂದು ಮಹಾಸಭಾ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಸವಿತಾ ಅಮರಶೆಟ್ಟಿ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಹೃದಯ ರೋಗ ತಜ್ಞೆ ವಿಜಯಲಕ್ಷ್ಮೀ ಬಾಳೆಕುಂದ್ರಿ ಉದ್ಘಾಟಿಸಿ ‘ಅಕ್ಕಮಹಾದೇವಿ ಚಿಂತನೆಗಳ ಪ್ರಸ್ತುತತೆ’ ಕುರಿತು ಉಪನ್ಯಾಸ ನೀಡುವರು. ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ ಪಾಟೀಲ ಅಧ್ಯಕ್ಷತೆ ವಹಿಸುವರು’ ಎಂದು ಹೇಳಿದರು.

‘ಎಂಟು ಸಾಧಕಿಯರನ್ನು ಸನ್ಮಾನಿಸಲಾಗುವುದು. ಬಳಿಕ, ರತಿಕಾ ನೃತ್ಯ ನಿಕೇತನದ ವಿದ್ಯಾರ್ಥಿನಿಯರು ಅಕ್ಕಮಹಾದೇವಿ ವಚನ ಗಾಯನ ಹಾಗೂ ನೃತ್ಯ ರೂಪಕ ಪ್ರಸ್ತುತಪಡಿಸುವರು’ ಎಂದರು. ಮಹಾಸಭಾ ಉಪಾಧ್ಯಕ್ಷೆ ಪಾರ್ವತಿ ಹಾಲಭಾವಿ, ಸುವರ್ಣಾ ಬಿರಾದಾರ, ವಿಜಯಲಕ್ಷ್ಮೀ ಕಲ್ಯಾಣಶೆಟ್ಟರ್, ಸುಧಾ ಕಬ್ಬೂರ, ನಾಗರತ್ನ ಹಡಗಲಿ, ಸಂಧ್ಯಾ ಅಂಬಡಗಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-24-64029210

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.