ಧಾರವಾಡ: ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆಗೆ (ಅಕ್ಸಾ) ಪ್ರತಿಭಟನೆ ನಡೆಸಲು ಧಾರವಾಡದ ಹೈಕೋರ್ಟ್ ಪೀಠ ಷರತ್ತುಬದ್ಧ ಅನುಮತಿ ನೀಡಿದೆ.

ಏಕಸದಸ್ಯ ಪೀಠ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರು ಆದೇಶ ನೀಡಿದ್ದಾರೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಪ್ರತಿಭಟನೆ ನಡೆಸಬೇಕು, 100ಕ್ಕಿಂತ ಹೆಚ್ಚು ಜನರು ಸೇರಬಾರದು ಮೊದಲಾದ ಷರತ್ತು ವಿಧಿಸಿದೆ.

ಕೆಪಿಎಸ್ಸಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಮತ್ತು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಆರಂಭಿಸಬೇಕು ಎಂದು ಒತ್ತಾಯಿಸಿ ಅಕ್ಸಾ ವತಿಯಿಂದ ಏ.8ರಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಸೆ.25 ಮತ್ತು ಫೆ.24ರಂದು ಅಕ್ಸಾ ವತಿಯಿಂದ ನಡೆದ ಪ್ರತಿಭಟನೆ ವೇಳೆ ನಿಯಮ ಉಲ್ಲಂಘಿಸಲಾಗಿದೆ ಎಂದು ಕಾರಣ ನೀಡಿದ ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರು. ಅಕ್ಸಾ ಸಂಘಟನೆಯವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

‘ಏ.15ರಂದು ಕೋರ್ಟ್ಗೆ ಅಫಿಡವಿಟ್ ಸಲ್ಲಿಸುತ್ತೇವೆ. ಪ್ರತಿಭಟನೆ ಮಾಡುತ್ತೇವೆ’ ಎಂದು ಅಕ್ಸಾ ಅಧ್ಯಕ್ಷ ಕಾಂತಕುಮಾರ ‘ಪ್ರಜಾವಾಣಿ’ಗೆ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-24-707236369

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.