ಧಾರವಾಡ: ‘ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳು ಸಾಧನೆಗೆ ಪ್ರೇರಕ ಶಕ್ತಿಯಾಗಿವೆ’ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಅಂಬೇಡ್ಕರ್ ಅವರ 135 ನೇ ಜಯಂತ್ಯುತ್ಸವ ಅಂಗವಾಗಿ ಸನ್ಮತಿ ಮಾರ್ಗದ ಅಂಬೇಡ್ಕರ್ ಭವನದಲ್ಲಿ ಸೋಮವಾರ ನಡೆದ ಆಯೋಜಿಸಿದ್ದ, ವಿಚಾರಗೋಷ್ಠಿಯಲ್ಲಿ ಮಾತನಾಡಿದರು.

ಅಂಬೇಡ್ಕರ್ ಅವರು ಸಂವಿಧಾನ ರಚಿಸಿ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಆದರ್ಶಗಳನ್ನು ಪಾಲಿಸಿದರೆ ಸಮಾನತೆ ಮತ್ತು ನ್ಯಾಯಯುತ ಸಮಾಜ ನಿರ್ಮಾಣ ಸಾಧ್ಯ. ಅವರ ಚಿಂತನೆಗಳು ಎಲ್ಲರಿಗೂ ದಾರಿದೀಪವಾಗಿವೆ ಎಂದರು.

ಹಿಂದೂ ಕೋಡ್ ಬಿಲ್ ಬಹಳ ಮುಖ್ಯವಾಗಿದೆ. ಈ ಕಾನೂನು ಭಾರತೀಯ ಸಮಾಜದಲ್ಲಿ ಮಹತ್ವದ ಸಾಮಾಜಿಕ ಬದಲಾವಣೆಗೆ ಕಾರಣವಾಯಿತು. ಹಿಂದೂ ಕೋಡ್ ಬಿಲ್ ಮೂಲಕ ಮಹಿಳೆಯರಿಗೆ ಹಲವು ಹಕ್ಕುಗಳನ್ನು ನೀಡಿದೆ. ಮಹಿಳೆಯರು ಸ್ಥಾನಮಾನವನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಬಿಲ್ ಮಹತ್ವದ ಹೆಜ್ಜೆಯಾಯಿತು ಎಂದರು.

ಕರ್ನಾಟಕ ವಿ.ವಿ ಮಾನವಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಸದಾನಂದ ಬಿ.ಸುಗಂಧಿ ಅವರು ಅಂಬೇಡ್ಕರ್ ವಿಚಾರಧಾರೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ರಾಮಣ್ಣ ಗಡ್ಡರ ಅವರು ಬುದ್ಧ ಪ್ರಾರ್ಥನೆ ಪಠಣ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ ಹೆಬ್ಬಳ್ಳಿ, ಎಂ.ಅರವಿಂದ, ಲಕ್ಷ್ಮಣ ಬಕ್ಕಾಯಿ, ಅಶೋಕ ದೊಡಮನಿ, ವೆಂಕಟೇಶ ಸಗಬಲಾ ಉಪಸ್ಥಿತರಿದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-24-1776030693

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.