ಧಾರವಾಡ: ಸಂವಿಧಾನ ರಚಿಸಿ, ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಿ.ಆರ್.ಅಂಬೇಡ್ಕರ್ ತತ್ವಾದರ್ಶಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮರಾಠಾ ವಿದ್ಯಾಪ್ರಸಾರಕ ಮಂಡಳದ ಕಾರ್ಯಾಧ್ಯಕ್ಷ ಸುನೀಲ ಮೋರೆ ಹೇಳಿದರು.

ನಗರದ ಮರಾಠ ವಿದ್ಯಾಪ್ರಸಾರಕ ಮಂಡಳದಲ್ಲಿ ಮಂಗಳವಾರ ನಡೆದ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.

ಬಿ.ಆರ್.ಅಂಬೇಡ್ಕರ್ ಕುರಿತು ಉಪನ್ಯಾಸ ನೀಡಿದ ಇತಿಹಾಸ ಉಪನ್ಯಾಸಕ ವಿ.ಎಂ.ಪೋಳ ಮಾತನಾಡಿ, ಬಡತನದಲ್ಲಿ ಜನಿಸಿದ ಅಂಬೇಡ್ಕರ್, ಅನೇಕ ಅವಮಾನಕ್ಕೆ ಒಳಗಾದ ಅವರು, ಸಮಾಜದಲ್ಲಿ ಮನೆ ಮಾಡಿದ ಅಸ್ಪೃಶ್ಯತೆ ನಿವಾರಣೆಗೆ ಶ್ರಮಿಸಿದ ಧೀಮಂತ ನಾಯಕರು ಎಂದರು.

ಸಂವಿಧಾನ ರಚಿಸುವ ಮೂಲಕ ಸಮಾಜದ ಎಲ್ಲ ವರ್ಗದವರಿಗೂ ಸಮಾನ ಹಕ್ಕುಗಳು, ಸಾಮಾಜಿಕ ನ್ಯಾಯ ಒದಗಿಸಿದ ಅಂಬೇಡ್ಕರ್, ಹಿಂದೂ ಕೋಡ್ ಬಿಲ್ ಜಾರಿಗೆ ತಂದರು. ಸಂವಿಧಾನ ಬರದಿದ್ದರೆ, ಮೇಲ್ವರ್ಗ ಹಾಗೂ ಕೆಳವರ್ಗದ ಜನಾಂಗ ಅಷ್ಟೇ ಇರುತ್ತಿತ್ತು. ಮಧ್ಯಮ ವರ್ಗವೇ ಇರುತ್ತಿರಲಿಲ್ಲ ಎಂದರು.

ಛತ್ರಪತಿ ಶಿವಾಜಿ ಮಹಾರಾಜ ಪದವಿ ಕಾಲೇಜಿನ ಪ್ರಾಚಾರ್ಯ ಎಂ.ಎಸ್.ಗಾಣಿಗೇರ, ಪ್ರೌಢ ಶಾಲೆ ಮುಖ್ಯಶಿಕ್ಷಕ ಎ.ಬಿ.ಬಾಬರ, ಎಂ.ಎ.ಘಾಟಗೆ ಎಸ್.ಎಂ. ಸಂಕೋಜಿ, ನಾಗರಾಜ ಆರೇರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-24-864774078

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.