ಧಾರವಾಡ: ಜನಸಂಖ್ಯೆಯನ್ನು ತರ್ಕಬದ್ಧಗೊಳಿಸುವ ಹೆಸರಲ್ಲಿ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ಕೈಬಿಡಬಾರದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ (ಎಐಯುಟಿಯುಸಿ) ಜಿಲ್ಲಾ ಘಟಕದವರು ಗುರುವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

‘ಆಶಾ ಕಾರ್ಯಕರ್ತೆಯರು 17 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಜನಸಂಖ್ಯೆ, ಶಿಕ್ಷಣ, ಮೌಲ್ಯಮಾಪನ ಇತ್ಯಾದಿಗಳ ಹೆಸರುಗಳಲ್ಲಿ ಅವರನ್ನು ತೆಗೆದು ಹಾಕುವ ನೀತಿಯು ಆಘಾತ ಉಂಟು ಮಾಡಿದೆ. 2009ರಲ್ಲಿ ನೇಮಕಾತಿ ಮಾಡಿಕೊಳ್ಳುವಾಗ ಇದಾವ ಮಾನದಂಡವನ್ನು ತಿಳಿಸಿಲ್ಲ. ಆರೋಗ್ಯ ಇಲಾಖೆಯ ಈಗಿನ ನೀತಿಯಿಂದ ಆಶಾ ಕಾರ್ಯಕರ್ತೆಯರು ಬೀದಿಗೆ ಬೀಳುವ ಆತಂಕ ಎದುರಾಗಿದೆ. ಈ ನೀತಿ ಕೈಬಿಡುವವರೆಗೂ ಹೋರಾಟ ಮಾಡುತ್ತೇವೆ’ ಎಂದು ಪ್ರತಿಭಟನಾಕಾರರು ಹೇಳಿದರು.

‘ಜನಸಂಖ್ಯೆ ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೈಬಿಟ್ಟರೆ ಕೇಂದ್ರದ ಮಾರ್ಗಸೂಚಿಯ ಉಲ್ಲಂಘನೆಯಾಗುತ್ತದೆ. ದೇಶದ ಯಾವುದೇ ರಾಜ್ಯದಲ್ಲಿ ಇಲ್ಲದಿರುವ ಈ ನೀತಿ ಕರ್ನಾಟಕದಲ್ಲಿ ಏಕೆ ತರಲಾಗಿದೆ? ಧಾರವಾಡ ಜಿಲ್ಲೆಯಲ್ಲಿ ಹಲವು ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ಕೈ ಬಿಡಲು ಸಿದ್ಧತೆ ನಡೆದಿದೆ. ಆತಂಕ ನಿವಾರಣೆಗೆ ಸಂಬಂಧಪಟ್ಟವರು ಕ್ರಮ ವಹಿಸಬೇಕು’ ಎಂದು ಆಗ್ರಹಿಸಿದರು.

‘ಮಾರ್ಚ್ 17ರಂದು ಹೋರಾಟ ಆರಂಭಿಸಲಾಗಿತ್ತು. ಸಂಘದ ಮುಖಂಡರೊಂದಿಗೆ ಸಭೆ ನಡೆಸಿ ಕ್ರಮವಹಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರಿಂದ ಪ್ರತಿಭಟನೆ ಹಿಂಪಡೆಯಲಾಗಿತ್ತು. 25ರಂದು ಸಭೆ ನಡೆಸಲಾಗಿದೆ, ಆದರೆ ಸಮಸ್ಯೆ ಪರಿಹಾರವಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಮಧ್ಯ ಪ್ರವೇಶಿಸಿ ಪರಿಹಾರಕ್ಕೆ ಕ್ರಮವಹಿಸಬೇಕು’ ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಅಧ್ಯಕ್ಷೆ ಭುವನಾ ಬಳ್ಳಾರಿ, ಉಪಾಧ್ಯಕ್ಷೆ ಶಾಂತಾ ಚವಾಣ್, ಶಾರದಾ ತಾವರಗೇರಿ, ಶೋಭಾ ಹಿರೇಮಠ, ರಾಧಾ ಕಲ್ಲೂರ್, ಸಂಗೀತ ಬೆಂಡಿಗೇರಿ, ಗೀತಾ ಮಲ್ಲನಗೌಡರ್, ಅಕ್ಕಮ್ಮ, ರತ್ನಾ ಕುಂದಗೋಳ, ಮಂಜುಳಾ ಹರವಿ, ರತ್ನಾ ಎಮೋಜಿ, ಗಾಯತ್ರಿ ಗುಡ್ಡದಕೇರಿ, ನಾಗವೇಣಿ ಪ್ರತಿಭಟನೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-24-460030437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.