ಧಾರವಾಡ: ‘ಬಸವೇಶ್ವರ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸೈಟಿಯ ರಜತ ಮಹೋತ್ಸವದ ಅಂಗವಾಗಿ ಮಾರ್ಚ್ 25ರಂದು ಬೆಳಿಗ್ಗೆ 11 ಗಂಟೆಗೆ ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವಿವಾಹ ಮಹೋತ್ಸವ ಆಯೋಜಿಸಲಾಗಿದೆ’ ಎಂದು ಸೊಸೈಟಿ ಅಧ್ಯಕ್ಷ ಸಹದೇವ ನಿಗದಿ ಹೇಳಿದರು.

‘ಬೆಳಗಾವಿಯ ಮುಕ್ತಿಮಠದ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಬಳ್ಳಾರಿ ಅಜ್ಜನವರು ಸಾನ್ನಿಧ್ಯ ವಹಿಸುವರು. ಉಳವಿ ಚನ್ನಬಸವೇಶ್ವರ ಧರ್ಮ ಪಂಡ ಸಂಸ್ಥೆಯ ಅಧ್ಯಕ್ಷ ಎಸ್.ಆರ್. ರಾಮನಗೌಡರ, ಕಾರ್ಯಾಧ್ಯಕ್ಷ ಬಿ.ಎಂ. ಸೂರಗೊಂಡ ಪಾಲ್ಗೊಳ್ಳುವರು’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಹು-ಧಾ ಮಹಾನಗರ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ, ಮಾಜಿ ಶಾಸಕರಾದ ಸೀಮಾ ಮಸೂತಿ, ಅಮೃತ ದೇಸಾಯಿ, ಹು-ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ ಪಾಲ್ಗೊಳ್ಳುವರು’ ಎಂದು ಹೇಳಿದರು.

‘24ರಂದು ಸಂಜೆ 5.30ಕ್ಕೆ ಗಾಂಧಿ ಚೌಕ್ದಿಂದ ಕಲಾಭವನದ ವರೆಗೆ 21 ಜೋಡಿ ವಧು-ವರರ ಮೆರವಣಿಗೆ ನಡೆಯಲಿದೆ. ವಿವಾಹವಾದ ಎಲ್ಲ ವಧು-ವರರನ್ನು ಅಯೋಧ್ಯ, ಕಾಸಿ, ಪ್ರಯಾಗರಾಜ್, ಆಗ್ರಾ, ಮಥುರಾ ಸೇರಿದಂತೆ ಪ್ರಮುಖ ಸ್ಥಳಗಳಿಗೆ ಪ್ರವಾಸ ಉಚಿತ ಮಾಡಿಸಲಾಗುವುದು’ ಎಂದರು.

ಮುಖಂಡ ಮೋಹನ ರಾಮದುರ್ಗ, ಮೈಲಾರ ಉಪ್ಪಿನ, ಗದಿಗೆಪ್ಪ ಮುದಿಯಪ್ಪನವರ, ಶಿವಾನಂದ ಗುಂಡಗೋವಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-24-755955933

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.