ಧಾರವಾಡ: ‘ಮೂಲ ವಿಜ್ಞಾನದ ಅರಿವಿಲ್ಲದಿದ್ದರೆ ಹೊಸತೇನನ್ನೂ ಶೋಧಿಸಲಾಗುವುದಿಲ್ಲ. ಮೂಲವಿಜ್ಞಾನವನ್ನು ಅನ್ವಯಿಕ ವಿಜ್ಞಾನವನ್ನಾಗಿ ಬಳಸಿಕೊಂಡು ನವನವೀನ ವೈಜ್ಞಾನಿಕ ಪರಿಕಲ್ಪನೆಗಳನ್ನು ತಂತ್ರಜ್ಞಾನದ ನೆರವಿನಿಂದ ಸಾಕಾರಗೊಳಿಸಬಹುದಾಗಿದೆ’ ಎಂದು ನಿವೃತ್ತ ಪ್ರಾಧ್ಯಾಪಕ ಎಸ್.ಟಿ.ನಂದಿಬೇವೂರ ಹೇಳಿದರು.

ಕರ್ನಾಟಕ ವಿಶ್ವವಿದ್ಯಾಲಯದ ವೈಜ್ಞಾನಿಕ ಉಪಕರಣಗಳ ಕೇಂದ್ರ (ಯುಸಿಕ್)ವು ನವದೆಹಲಿಯ ವಿಜ್ಞಾನ- ತಂತ್ರಜ್ಞಾನ ಇಲಾಖೆಯ (ಡಿಎಸ್ಟಿ) ಸಹಯೋಗದೊಂದಿಗೆ ಪಿಎಂ ಉಷಾ ಯೋಜನೆಯಡಿ ಈಚೆಗೆ ನಡೆದ`ಅತ್ಯಾಧುನಿಕ ವಿಶ್ಲೇಷಣಾತ್ಮಕ ಉಪಕರಣಗಳು’ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

‘ಪ್ರಸ್ತುತ ಎಲ್ಲರೂ ಕೃತಕ ಬುದ್ಧಿಮತ್ತೆ (ಎಐ) ಕುರಿತು ಜಪಿಸುತ್ತಿದ್ದಾರೆ. ಆದರೆ, ಅದಕ್ಕೆ ತಾಯಿಯಂತಿರುವ ಮೂಲವಿಜ್ಞಾನವನ್ನು ಮರೆಯಬಾರದು’ ಎಂದು ಹೇಳಿದರು.

ಪ್ರೊ ಎಂ.ಡೆವಿಡ್, ‘ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಬಳಸಿಕೊಳ್ಳುವುದಕ್ಕೆ ಪೂರಕವಾಗಿ ನಾವು ಬೇಕಾದ ವೈಜ್ಞಾನಿಕ ಸಲಕರಣೆಗಳ ಬಗ್ಗೆ ಅರಿತುಕೊಳ್ಳುವುದು ಅನಿವಾರ್ಯ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260306-24-1869477402

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.