ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ, ಬೆಳಗಾವಿ, ವಿಜಯನಗರ ಜಿಲ್ಲೆಗಳಲ್ಲಿ ಉತ್ತಮ ಮಳೆ

Published 10 ಏಪ್ರಿಲ್ 2024, 16:11 IST
Last Updated 10 ಏಪ್ರಿಲ್ 2024, 16:11 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಧಾರವಾಡ, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ಉತ್ತಮ ಮಳೆಯಾಯಿತು.

ಹುಬ್ಬಳ್ಳಿ ನಗರ ಸೇರಿ ಧಾರವಾಡ ಜಿಲ್ಲೆ ವ್ಯಾಪ್ತಿಯ ಕಲಘಟಗಿ, ನವಲಗುಂದ, ಕುಂದಗೋಳ ಭಾಗದಲ್ಲಿ ಮಳೆಯಾಯಿತು. ಜೋರಾಗಿ ಮಳೆಯಾದ ಪರಿಣಾಮ ಹುಬ್ಬಳ್ಳಿಯ ಬಹುತೇಕ ಕಡೆ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಯಿತು. ಕೆಲ ಕಡೆ ಮರಗಳು ಉರುಳಿ ಬಿದ್ದವು. ಅಲ್ಲಲ್ಲಿ ವಿದ್ಯುತ್ ಪೂರೈಕೆ ಕಡಿತಗೊಳಿಸಲಾಯಿತು.

ಬೆಳಗಾವಿ ಜಿಲ್ಲೆಯ ಹುಕ್ಕೇರಿ, ಸಂಕೇಶ್ವರ ಹಾಗೂ ಯಮಕನಮರಡಿ ಭಾಗದಲ್ಲಿ ಒಂದು ಗಂಟೆಗೂ ಹೆಚ್ಚು ಹೊತ್ತು ಉತ್ತಮ ಮಳೆ ಸುರಿಯಿತು. ಬೆಳಗಾವಿ ನಗರ, ತಾಲ್ಲೂಕಿನಲ್ಲಿ ತುಂತುರು ಮಳೆ ಸುರಿಯಿತು.

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆ ಹೋಬಳಿ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಮಳೆ ಸುರಿಯಿತು. ಅರಸೀಕೆರೆ, ಹೊಸಕೋಟೆ, ಕಣಬಘಟ್ಟ, ಅಣಜಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಿದೆ. ಉಚ್ಚಂಗಿದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತುಂತುರು ಮಳೆಯಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT