ಹುಬ್ಬಳ್ಳಿ: ವ್ಯಕ್ತಿಯೊಬ್ಬರೊಂದಿಗೆ ಅಪರಿಚಿತರು ಗಲಾಟೆ ಮಾಡಿ ಚೂಪಾದ ಬಾಟಲಿಯಿಂದ ಎದೆಗೆ ಇರಿದು ಗಾಯಗೊಳಿಸಿದ ಘಟನೆ ಧಾರವಾಡದ ಸಿಬಿಟಿ ಬಸ್ ನಿಲ್ದಾಣದ ಬಳಿ ನಡೆದಿದ್ದು, ನವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧಾರವಾಡದ ಪೆಂಡಾರ ಓಣಿ ನಿವಾಸಿ ಮಹ್ಮದ್ ರಫೀಕ್ ಮೆಸ್ತ್ರಿ ಹಲ್ಲೆಗೊಳಗಾದವರು.

‘ಧಾರವಾಡದ ಸಿಬಿಟಿ ಬಸ್ ನಿಲ್ದಾಣದ ಬಳಿ ಮಹ್ಮದ್ ರಫೀಕ್ ಅವರೊಂದಿಗೆ ನಾಲ್ವರು ಗಲಾಟೆ ಮಾಡಿ ಬಾಟಲಿಯಿಂದ ಇರಿದಿದ್ದಾರೆ. ಗಾಯಗೊಂಡಿದ್ದ ರಫೀಕ್, ನವನಗರ ಬಳಿ ರಸ್ತೆ ಪಕ್ಕದಲ್ಲಿ ಬಿದ್ದಿದ್ದರು. ಪ್ರಕರಣ ದಾಖಲಿಸಿಕೊಂಡು ಗಾಯಾಳುವನ್ನು ಕಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಕೃತ್ಯದ ದೃಶ್ಯ ಸ್ಥಳದಲ್ಲಿದ್ದ ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಳ ಪತ್ತೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

₹2.26 ಲಕ್ಷ ವಂಚನೆ: ಅಪರಿಚಿತ ವ್ಯಕ್ತಿಯೊಬ್ಬ ನವನಗರದ ಮಹಿಳೆಯೊಬ್ಬರಿಗೆ ₹2.26 ಲಕ್ಷ ವಂಚಿಸಿದ ಪ್ರಕರಣ ನವನಗರ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ನಿರ್ಮಲಾ ಚೌರಿ ವಂಚನೆಗೆ ಒಳಗಾದವರು. ‘ಮಂಗಳವಾರ ಮಧ್ಯಾಹ್ನ ಅಪರಿಚಿತ ವ್ಯಕ್ತಿ ಕರೆ ಮಾಡಿ, ವಿವಿಧ ಬ್ಯಾಂಕ್ ಖಾತೆಗಳಿಂದ ₹97,999, ₹79,398 ಹಾಗೂ ₹48,975 ವರ್ಗಾಯಿಸಿಕೊಂಡು ವಂಚಿಸಿದ್ದಾನೆ’ ಎಂದು ಮಹಿಳೆಯು ದೂರಿನಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-24-1502326702

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.