ಗುಡಗೇರಿ (ಧಾರವಾಡ ಜಿಲ್ಲೆ): ವಿದ್ಯುತ್ ಸ್ಪರ್ಶದಿಂದ ಒಳಗಾದ ಬಾಲಕ, ಸಕಾಲಕ್ಕೆ ವೈದ್ಯಕೀಯ ಚಿಕಿತ್ಸೆ ಮತ್ತು ಸೌಲಭ್ಯ ಸಿಗದೇ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಗ್ರಾಮಸ್ಥರು ಇಲ್ಲಿನ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಬೀಗ ಜಡಿದು ಶನಿವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಅಂಬೇಡ್ಕರ್ ನಗರದ ನಿವಾಸಿ ಮಾಂತೇಶ ಪೂಜಾರ (12) ಮೃತಪಟ್ಟ ಬಾಲಕ. 'ವಿದ್ಯುತ್ ಸ್ಪರ್ಶಕ್ಕೆ ಒಳಗಾದ ಬಾಲಕನನ್ನು ತಕ್ಷಣವೇ ಗುಡಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಸೂಕ್ತ ಚಿಕಿತ್ಸೆ ಲಭ್ಯವಾಗದ ಕಾರಣ 108 ಆಂಬುಲೆನ್ಸ್ ಮೂಲಕ ಕುಂದಗೋಳಕ್ಕೆ ಕರೆದೊಯ್ಯಲು ಪ್ರಯತ್ನಿಸಲಾಯಿತು. ಆದರೆ, ಮಾರ್ಗ ಮಧ್ಯೆಯೇ ಆತ ಕೊನೆಯುಸಿರೆಳೆದ. ಸಕಾಲಕ್ಕೆ ವೈದ್ಯಕೀಯ ಚಿಕಿತ್ಸೆ ಮತ್ತು ಸೌಲಭ್ಯ ಸಿಕ್ಕಿದ್ದರೆ, ಆತ ಬದುಕುಳಿಯುತ್ತಿದ್ದ' ಎಂದು ಗ್ರಾಮಸ್ಥರು ಹೇಳಿದರು.

'ಅಂಬುಲೆನ್ಸ್ ನಲ್ಲಿ ಆಕ್ಸಿಜನ್ ವ್ಯವಸ್ಥೆ ಇರಲಿಲ್ಲ. ತುರ್ತು ಚಿಕಿತ್ಸೆ ನೀಡುವ ವೈದ್ಯರೂ ಇರಲಿಲ್ಲ. ವೈದ್ಯಕೀಯ ಸೇವೆ ಸಮರ್ಪಕವಾಗಿ ಇಲ್ಲದಿರುವುದಕ್ಕೆ ಇದು ಸಾಕ್ಷಿಯಾಗಿದೆ' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

'ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ, ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಬರುವ ವರಗೆ ಮತ್ತು ಬಾಲಕನ ಕುಟುಂಬಕ್ಕೆ ಪರಿಹಾರ ಸಿಗುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ' ಎಂದು ಗ್ರಾಮಸ್ಥರು ಪಟ್ಟು ಹಿಡಿದರು.

ಪೊಲೀಸರು ಎಷ್ಟೇ ಮನವೊಲಿಸಸಿದರೂ ಒಪ್ಪದ ಗ್ರಾಮಸ್ಥರು ಈಗ ಲಕ್ಷ್ಮೇಶ್ವರ - ಹುಲಗೂರ ರಸ್ತೆ ತಡೆ ನಡೆಸಿದ್ದಾರೆ.ರಸ್ತೆ ಮಧ್ಯೆ ಕೂತಿರುವ ಅವರು, ವಾಹನಗಳ ಸುಗಮ ಸಂಚಾರ ತಡೆದಿದ್ದಾರೆ. ತಮ್ಮ ಬೇಡಿಕೆಗಳಿಗೆ ತಕ್ಷಣವೇ ಸ್ಪಂದಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.