ಗುಡಗೇರಿ(ಧಾರವಾಡಜಿಲ್ಲೆ): ಗ್ರಾಮದ ಅಂಬೇಡ್ಕರ್ ನಗರದ ಬಾಲಕ ಕಾರ್ತಿಕ್ ಮಹಾಂತೇಶ ಪೂಜಾರ್ (7) ವಿದ್ಯುತ್ ತಗುಲಿ, ಪ್ರಾಥಮಿಕ ಚಿಕಿತ್ಸೆ ದೊರೆಯದೆ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಗ್ರಾಮಸ್ಥರು ಶನಿವಾರ 9 ತಾಸು ಪ್ರತಿಭಟನೆ ನಡೆಸಿದರು.

‘ಗ್ರಾಮದ ಮೈಲಾರಲಿಂಗೇಶ್ವರ ದೇವಸ್ಥಾನ ಬಳಿ ಆಡಲು ಹೋದ ಬಾಲಕನಿಗೆ ವಿದ್ಯುತ್ ತಾಗಿದ್ದರಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ. ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಾಗ ಸೂಕ್ತ ಚಿಕಿತ್ಸೆ ಸಿಗದೇ ಹಾಗೂ ತುರ್ತು ಸೇವೆ ಒದಗಿಸಬೇಕಾದ 108 ಆಂಬುಲೆನ್ಸ್ ಬೇಜವಾಬ್ದಾರಿತನದಿಂದಾಗಿ ದಾರಿಮಧ್ಯೆ ಮೃತಪಟ್ಟಿದ್ದಾನೆ. ಆಂಬುಲೆನ್ಸ್ನಲ್ಲಿ ಕನಿಷ್ಠ ಆಕ್ಸಿಜನ್ ಕಿಟ್ ಅಥವಾ ಅಗತ್ಯ ಜೀವ ರಕ್ಷಕ ವೈದ್ಯಕೀಯ ಸೌಲಭ್ಯಗಳೇ ಇರಲಿಲ್ಲ’ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮಸ್ಥರು ಹಾಗೂ ಮೃತನ ಸಂಬಂಧಿಕರು ಆಂಬುಲೆನ್ಸ್ನಲ್ಲಿಯೇ ಶವವಿಟ್ಟು ಪ್ರತಿಭಟನೆ ಆರಂಭಿಸಿ, ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ವೈದ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದರು.

‘ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ಹಾಗೂ ಆಂಬುಲೆನ್ಸ್ ಸಿಬ್ಬಂದಿಯ ಬೇಜವಾಬ್ದಾರಿತನವೇ ಘಟನೆಗೆ ಕಾರಣ. ಅವರನ್ನು ಅಮಾನತುಗೊಳಿಸಬೇಕು, ಬಾಲಕನ ಕುಟುಂಬಕ್ಕೆ ಪರಿಹಾರ ನೀಡಬೇಕು’ ಎಂದು ಪಟ್ಟು ಹಿಡಿದು ಲಕ್ಷ್ಮೇಶ್ವರ– ಹುಲಗೂರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಷಣ್ಮುಖ ಶಿವಳ್ಳಿ ಬಂದು ಪ್ರತಿಭಟನಕಾರರನ್ನು ಮನವೊಲಿಸಲು ಪ್ರಯತ್ನಿಸಿದರು. ‘ಗುಡಗೇರಿ ಆಸ್ಪತ್ರೆಗೆ ಕೊರತೆಯಿರುವ ವೈದ್ಯರನ್ನು ನೇಮಕ ಮಾಡಿಕೊಡುವುದು, ನಿರ್ಲಕ್ಷ್ಯ ತೋರಿದ ವೈದ್ಯರನ್ನು ವರ್ಗಾಯಿಸುವುದು ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು’ ಎಂದು ಭರವಸೆ ನೀಡಿದರೂ ಪ್ರತಿಭಟನಕಾರರು ಒಪ್ಪಲಿಲ್ಲ. ತಹಶೀಲ್ದಾರ್ ರಾಜು ಮಾವರಕರ್ ಮನವೊಲಿಕೆ ಪ್ರಯತ್ನಕ್ಕೂ ಪ್ರತಿಭಟನಕಾರರು ಸ್ಪಂದಿಸಿಲ್ಲ.

ಉಪ ವಿಭಾಗಾಧಿಕಾರಿ ಶಾಲಂ ಹುಸೇನ್ ಭೇಟಿ ನೀಡಿ, ‘ಮುಖ್ಯಮಂತ್ರಿಗಳ ವಿಶೇಷ ಪರಿಹಾರ ನಿಧಿಯಲ್ಲಿ ಪರಿಹಾರ ಕಲ್ಪಿಸಲಾಗುವುದು. ಘಟನೆಗೆ ಸಂಬಂಧಪಟ್ಟ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮೇ 18ರಂದು ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸಭೆ ನಡೆಸಿ ಸೂಕ್ತ ಪರಿಹಾರ ನೀಡಲಾಗುವುದು’ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ಬಾಲಕನ ಶವವನ್ನು ಹುಬ್ಬಳ್ಳಿಯ ಕೆಎಂಸಿ–ಆರ್ಐ ಆಸ್ಪತ್ರೆಗೆ ರವಾನಿಸಲಾಯಿತು.

ತಾಲ್ಲೂಕು ವೈದ್ಯಾಧಿಕಾರಿ ಮಂಜುನಾಥ ಸೊಪ್ಪಿನ ಮಠ, ಡಿವೈಎಸ್ಪಿ ವಿನೋದ ಮುಕ್ತೇದಾರ, ಸಿಪಿಐ ಸಮೀರ್ ಮುಲ್ಲಾ, ಪಿಎಸ್ಐ ಪ್ರವೀಣ್ ನೇಸರ್ಗಿ, ದಲಿತ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-22-1678964672

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.