ಧಾರವಾಡ: ‘ಕಾಂಗ್ರೆಸ್ ಯುವ ಘಟಕದ ಮುಖಂಡ ಫೈರೋಜ್ ಖಾನ್ ಪಠಾಣ್ ಹಾಗೂ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಫೋನ್ನಲ್ಲಿ ಮಾತನಾಡಿದ್ದು ಎನ್ನಲಾದ ಆಡಿಯೊಗಳು ನಾಲ್ಕು ವರ್ಷದ ಹಿಂದಿನವು. ಅವುಗಳನ್ನು ಕೂಲಂಕಷವಾಗಿ ಪರಿಶೀಲಿಸಿ ತನಿಖೆ ನಡೆಸಬೇಕು’ ಎಂದು ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೊರೆ ಆಗ್ರಹಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಫೈರೋಜ್ ಹತ್ಯೆ ಬಳಿಕ ಕೆಲವರು ಇಸ್ಮಾಯಿಲ್ ಅವರ ಆಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟಿದ್ದಾರೆ.ಆಡಿಯೊಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ, ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹು-ಧಾ ಮಹಾನಗರ ಪೊಲೀಸ್ ಕಮಿಷನರ್ ಅವರಿಗೆ ಅಂಜುಮನ್ ಸಂಸ್ಥೆಯ ಮೂಲಕ ಮನವಿ ಸಲ್ಲಿಸಿದ್ದೇವೆ’ ಎಂದರು.

‘ಆಡಿಯೊ ಹರಿಯಬಿಟ್ಟಿರುವುದರ ಹಿಂದೆ ಷಡ್ಯಂತ್ರ ಇದೆ. ಪೊಲೀಸರು ಇದರ ಸತ್ಯಾಸತ್ಯತೆಯಿಂದ ಪರಿಶೀಲಿಸಬೇಕು. ಜನರಿಗೆ ತಪ್ಪು ಸಂದೇಶ ಹೊಗಬಾರದು‘ ಎಂದರು. ಅಂಜುಮನ್ ಸಂಸ್ಥೆಯ ಬಶೀರ್ ಅಹಮದ್ ಜಾಗೀರದಾರ, ತವನಪ್ಪ ಅಷ್ಟಗಿ, ಎಸ್.ಎಸ್. ಸರಗಿರೋ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-24-1468131537

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.