ಧಾರವಾಡ: ‘ಕಾಂಗ್ರೆಸ್ ಮುಖಂಡ ಫೈರೋಜ್ ಖಾನ್ ಪಠಾಣ್ ಕೊಲೆ ಪ್ರಕರಣದ ವಿಚಾರಣೆ ನಿಟ್ಟಿನಲ್ಲಿ ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬ್ಲೂಕಾರ್ನರ್ ನೋಟಿಸ್ ಜಾರಿಗೊಳಿಸಿದ್ದಾರೆ. ಪೊಲೀಸರು ಕ್ರಮ ವಹಿಸುತ್ತಾರೆ’ ಎಂದರು.

‘ವಿನಯ ಕುಲಕರ್ಣಿ ವಿಚಾರದಲ್ಲಿ ಏ.25ರಂದು ನಗರದಲ್ಲಿ ಮೌನ ಮೆರವಣಿಗೆ ನಡೆಸಿರುವುದಕ್ಕೆ ಒಪ್ಪಿಗೆ ಇದೆ. ಸಭೆಯಲ್ಲಿ ಯಾರು ಏನು ಮಾತನಾಡಿದ್ದಾರೆ ಎಂದು ಗೊತ್ತಿಲ್ಲ’ ಎಂದು ಉತ್ತರಿಸಿದರು.

‘ಎಪಿಎಂಸಿ ಸಮಗ್ರ ವರದಿ ನೀಡಲು ತಿಳಿಸಿದ್ದೇನೆ. ಎಪಿಎಂಸಿ ಅಭಿವೃದ್ಧಿಗೆ ಸಾರ್ವಜನಿಕ–ಖಾಸಗಿ (ಪಿಪಿಪಿ) ಸಹಭಾಗಿತ್ವದಲ್ಲಿ ಯೋಜನೆ ರೂಪಿಸುವ ಚಿಂತನೆ ಇದೆ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-24-980991215

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.