ಧಾರವಾಡ: ಪಾಲಿಕೆ ವಿಭಜನೆ ಪ್ರಸ್ತಾವ ಕೈಬಿಡುವಂತೆ ರಾಜ್ಯಪಾಲರಿಗೆ ಶಾಸಕ ಅರವಿಂದ ಬೆಲ್ಲದ ಬರೆದಿರುವ ಪತ್ರಹಿಂಪಡೆಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನವರು ಮರಾಠಾ ಕಾಲೊನಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅವರ ನಿವಾಸದ ಎದುರು ಸಮಾವೇಶಗೊಂಡು ಪ್ರತಿಭಟನೆ ನಡೆಸಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಅರವಿಂದ ಬೆಲ್ಲದ, ಮೇಯರ್ ಜ್ಯೋತಿ ಪಾಟೀಲ, ಪಾಲಿಕೆ ಸಭಾನಾಯಕ ಈರೇಶ ಅಂಚಟಗೇರಿ ವಿರುದ್ಧ ಘೋಷಣೆ ಕೂಗಿದರು.

ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಮಾತನಾಡಿ, ‘ಪ್ರತ್ಯೇಕ ಪಾಲಿಕೆ ರಚನೆಯಲ್ಲಿ ಶಾಸಕ ಅರವಿಂದ ಬೆಲ್ಲದ ಅವರು ದಂದ್ವ ನಿಲುವು ಅನುಸರಿಸುತ್ತಿರುವುದು ಖಂಡನೀಯ. ಕೂಡಲೇ ರಾಜ್ಯಪಾಲರಿಗೆ ಬರೆದಿರುವ ಪತ್ರವನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಪ್ರತಿಭಟನಾಕಾರ ಜತೆಗೆ ಮಾತನಾಡಿದ ಚಂದ್ರಕಾಂತ ಬೆಲ್ಲದ, ‘ಹುಬ್ಬಳ್ಳಿ ಮನೆಯಲ್ಲಿ ಅರವಿಂದ ಬೆಲ್ಲದ ಇರುತ್ತಾರೆ. ಅಲ್ಲಿ ಹೋಗಿ ಅವರ ಗಮನ ಸೆಳೆಯಬೇಕು’ ಎಂದರು.

ಪ್ರತಿಭಟನಕಾರರು ವಿಶ್ವಕರ್ಮ ವೃತ್ತದಲ್ಲಿ ಕೆಲ ಹೊತ್ತು ರಸ್ತೆ ತಡೆ ನಡೆಸಿದರು. ನಾಗರಾಜ ಗುರಿಕಾರ, ಕೆ.ಪಿ. ನೀರಲಕಟ್ಟಿ, ಆನಂದ ಮುಶಣ್ಣವರ, ಸ್ವಾತಿ ಮಾಳಗಿ, ಮುದಕೇಶ ಮಾದರ ಪ್ರತಿಭಟನೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-24-839736276

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.