ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಅಂತಿಮ ಹಂತದಲ್ಲಿದ್ದು, ಇಂದು (ಸೋಮವಾರ) ಸಂಜೆ ವೇಳೆಗೆ ಟಿಕೆಟ್ ಘೋಷಣೆಯಾಗಲಿದೆ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.

ಇಲ್ಲಿನ ವಿಮಾನನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು 'ಈ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆ ವಿಷಯದಲ್ಲಿ ಸ್ವಲ್ಪ ಗೊಂದಲ ಆಗಿದ್ದು ನಿಜ. ಶೀಘ್ರವೇ ಇದು ಪರಿಹಾರವಾಗಲಿದೆ. ಕಾಂಗ್ರೆಸ್ ಯಾವತ್ತೂ ಜಾತಿ ಆಧಾರದ ಮೇಲೆ ಟಿಕೆಟ್ ನೀಡುವುದಿಲ್ಲ ಎಂದರು.

ದೇಶಪಾಂಡೆ ಅವರ ಜೊತೆಯಲ್ಲೇ ಬಂದ ಟಿಕೆಟ್ ಆಕಾಂಕ್ಷಿ ವಿನಯ ಕುಲಕರ್ಣಿ 'ಟಿಕೆಟ್ ನನಗೇ ಕೊಡಬೇಕು ಎಂದು ಪಟ್ಟು ಹಿಡಿದಿರುವುದು ನಿಜ. ಆದರೆ, ಚುನಾವಣೆಯನ್ನು ನಾನೊಬ್ಬನೇ ಎದುರಿಸಲು ಆಗುವುದಿಲ್ಲ. ಎಲ್ಲರೂ ಸೇರಿ ಕೆಲಸ ಮಾಡಬೇಕಾಗುತ್ತದೆ' ಎಂದರು.

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಪ್ರಶ್ನೆಯೇ ಬರುವುದಿಲ್ಲ. ಪಕ್ಷ ನನಗೇ ಟಿಕೆಟ್ ನೀಡುತ್ತದೆ ಎನ್ನುವುದು ಖಾತ್ರಿ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಿಕೆಟ್ಗಾಗಿ ವಿನಯ ಕುಲಕರ್ಣಿ ಹಾಗೂ ಪ್ರೊ ಐ.ಜಿ. ಸನದಿ ನಡುವೆ ಪೈಪೋಟಿ ಎರ್ಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.