ಧಾರವಾಡ: ‘ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಪೊಲೀಸರಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಂಪೂರ್ಣ ಸ್ವಾತಂತ್ರ್ಯ (ಫ್ರೀ ಹ್ಯಾಂಡ್) ನೀಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿ ಸಿದ್ದ ಜಿಲ್ಲಾ ಹಾಗೂ ಮಹಾನಗರ ಪೊಲೀಸ್ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ, ಅದಕ್ಕೆ ಕುಮ್ಮಕ್ಕು ನೀಡುವ, ಡ್ರಗ್ಸ್, ಗಾಂಜಾ, ಅಫೀಮು ಪ್ರಕರಣಗಳಲ್ಲಿ ಸಿಗುವ ವ್ಯಕ್ತಿಗಳ ವಿರುದ್ಧ ಕಾನೂನಾತ್ಮಕವಾಗಿ ಕಠಿಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯನ್ನು ಡ್ರಗ್ಸ್, ಗಾಂಜಾ ಮತ್ತು ಅಪರಾಧ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲ ಪೊಲೀಸ್ ಅಧಿಕಾರಿಗಳು ಕ್ರಮವಹಿಸಬೇಕು’ ಎಂದು ಸೂಚನೆ ನೀಡಿದರು

‘ಕಳೆದ ಐದಾರು ತಿಂಗಳಿಂದ ಅಪರಾಧಗಳ ಸಂಖ್ಯೆ ಕಡಿಮೆ ಆಗಿದ್ದರೂ ಸಂಪೂರ್ಣ ನಿಯಂತ್ರಣವಾಗಿಲ್ಲ. ಡ್ರಗ್ಸ್, ಗಾಂಜಾ ಸೇವನೆ, ಮಾರಾಟ ಕಡಿಮೆ ಆಗಿದ್ದರೂ ಸಂಪೂರ್ಣ ನಿಲ್ಲುತ್ತಿಲ್ಲ. ಕೆಳಮಟ್ಟದಿಂದ ಪೊಲೀಸ್ ಅಧಿಕಾರಿಗಳು ಪ್ರತಿ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಿ, ತನಿಖೆ ಮಾಡಿ, ನಿಜವಾದ ಆರೋಪಿಗಳ ಮೇಲೆ ಕ್ರಮ ಜರುಗಿಸಬೇಕು’ ಎಂದು ತಿಳಿಸಿದರು.

‘ಜಿಲ್ಲೆಯು ವಿದ್ಯಾವಂತರ ನಾಡು. ಸಾಹಿತ್ಯ, ಸಂಸ್ಕೃತಿಯ ನೆಲ ಎಂಬುದು ಮರುಕಳಿಸುವಂತೆ ನಾವೆಲ್ಲರೂ ಕೆಲಸ ಮಾಡುವ ಅಗತ್ಯವಿದೆ. ಇದಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯವಿದೆ. ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ರೂಪಿಸಿ ಜಿಲ್ಲಾಡಳಿತ ಕಾರ್ಯೋನ್ಮುಖವಾಗಬೇಕು’ ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಸ್ನೇಹಲ್ ಆರ್., ಹು–ಧಾ ಮಹಾನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಡಿಸಿಪಿಗಳಾದ ರವೀಶ ಸಿ.ಆರ್., ಶ್ರುತಿ ಎನ್.ಎಸ್. ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-24-1370865781

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.