ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ | ಗ್ರಾ. ಪಂ ಸದಸ್ಯ ಕೊಲೆ; ಆಸ್ತಿ ವಿಚಾರಕ್ಕೆ ಸಂಬಂಧಿಕರಿಂದ ಕೃತ್ಯ

Published 22 ನವೆಂಬರ್ 2023, 20:30 IST
Last Updated 22 ನವೆಂಬರ್ 2023, 20:30 IST
ಅಕ್ಷರ ಗಾತ್ರ

ಕಲಘಟಗಿ (ಧಾರವಾಡ): ತಾಲ್ಲೂಕಿನ ಭೋಗೇನಾಗರಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯ ನಿಂಗಪ್ಪ ಬಸಪ್ಪ ದಾಸಪ್ಪನವರ (35) ಅವರನ್ನು ಬುಧವಾರ ಸಂಜೆ ಕೊಲೆ ಮಾಡಲಾಗಿದೆ. ಆಸ್ತಿ ವಿಚಾರದ ದ್ವೇಷದಲ್ಲಿ ಸಂಬಂಧಿಕರೇ ಕೃತ್ಯ ಎಸಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ನಿಂಗಪ್ಪ ಅವರ ಊರು ಬಗಡಗೇರಿಯ ಪ್ರಯಾಣಿಕರ ತಂಗುದಾಣ ಪ್ರದೇಶದಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ತಲೆ, ಕುತ್ತಿಗೆ ಭಾಗದಲ್ಲಿ ರಕ್ತ ಸೋರಿದೆ. ನಿಂಗಪ್ಪ ಅವರ ಅತ್ತೆಯ ಆಸ್ತಿ ಮಾರಾಟ ವಿಚಾರದ ದ್ವೇಷದಲ್ಲಿ ಕೃತ್ಯ ಸಂಬಂಧಿಕರಿಬ್ಬರು ಕೃತ್ಯ ಎಸಗಿದ್ದಾರೆ. ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ಧಾರೆ.

ಪೊಲೀಸ್‌ ಇನ್‌ಸ್ಪೆಕ್ಟರ್‌ ಶ್ರೀಶೈಲ ಕೌಜಲಗಿ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಬಂಧಿಸಿದಂತೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಪ್ರಕರಣಕ್ಕೆ ಸಬಂಧಿಸಿದಂತೆ ತನಿಖೆ ಮುಂದುವರಿದಿದೆ.

ಆರೋಪಿಗಳಿಗಾಗಿ ಶೋಧ: ಆಸ್ತಿ ವಿಚಾರಕ್ಕೆ ನಿಂಗಪ್ಪ ಅವರ ಸಂಬಂಧಿಕರೇ ಕೊಲೆ ಮಾಡಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT