ಧಾರವಾಡ: ಕೃಷಿ ಇಲಾಖೆ ವತಿಯಿಂದ 2024 -25 ನೇ ಸಾಲಿನ ಕೃಷಿ ಪ್ರಶಸ್ತಿಯಡಿ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ, ಜಿಲ್ಲೆ, ತಾಲ್ಲೂಕುಮಟ್ಟದಲ್ಲಿ ನಿಗದಿಪಡಿಸಿದ ವಿವಿಧ ಬೆಳೆಗಳಲ್ಲಿ ಬೆಳೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕೃಷಿ ಇಲಾಖೆಯ ಕೆ-ಕಿಸಾನ್ ಫೋರ್ಟಲ್‍ನಲ್ಲಿ ಸೆ. 10ರೊಳಗೆ ಅರ್ಜಿ ಸಲ್ಲಿಸಬೇಕು.
ಮಾಹಿತಿಗಾಗಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.