ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷ ಬೇರೆ, ನಿಲುವು ಒಂದೇ: ಸಂತೋಷ ಲಾಡ್‌

Published 14 ಏಪ್ರಿಲ್ 2024, 15:52 IST
Last Updated 14 ಏಪ್ರಿಲ್ 2024, 15:52 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಕಾಂಗ್ರೆಸ್‌ ಮತ್ತು ಆಮ್‌ ಆದ್ಮಿ ಪಕ್ಷ ಬೇರೆ ಆಗಿದ್ದರೂ, ಸೈದ್ಧಾಂತಿಕ ನಿಲುವು ಒಂದೇ ಆಗಿದೆ. ಪ್ರಸ್ತುತ ಲೋಕಸಭಾ ಚುನಾವಣೆಯನ್ನು ಎರಡೂ ಪಕ್ಷಗಳು ಒಂದಾಗಿ ಎದುರಿಸಲು ಸಿದ್ಧವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹೇಳಿದರು.

ಇಲ್ಲಿನ ಗೋಕುಲ ರಸ್ತೆಯ ಜೆ.‍ಪಿ. ನಗರದಲ್ಲಿರುವ ಆಮ್‌ ಆದ್ಮಿ ಪಕ್ಷದ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಿ.ಆರ್‌.ಅಂಬೇಡ್ಕರ್‌ ಜಯಂತಿ ಮತ್ತು ಇಂಡಿಯಾ ಒಕ್ಕೂಟದ ಸೆಂಟ್ರಲ್‌ ಕ್ಷೇತ್ರದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಎರಡೂ ಪಕ್ಷಗಳು ಸೈದ್ಧಾಂತಿಕವಾಗಿ ಅಭಿವೃದ್ಧಿಪರ ವಿಚಾರಧಾರೆ ಹೊಂದಿವೆ. ಪ್ರಸ್ತುತ ಭಾರತದಲ್ಲಿ ಬಿಜೆಪಿಯಿಂದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಕಗ್ಗೋಲೆಯಾಗುತ್ತಿದೆ. ಪ್ರತಿಯೊಬ್ಬರಿಗೂ ಇದರ ಅರಿವು ಆಗುತ್ತಿದೆ. ಬಿಜೆಪಿಯ ಭದ್ರಕೋಟೆಯಾದ ಧಾರವಾಡ ಜಿಲ್ಲೆಯನ್ನು ಕಾಂಗ್ರೆಸ್‌ ಮತ್ತು ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ಭೇದಿಸಲಿದ್ದಾರೆ’ ಎಂದರು.

‘ಧಾರವಾಡ ಲೋಕಸಭಾ ಕ್ಷೇತ್ರದ ಜನರಿಗೆ 20 ವರ್ಷಗಳಿಂದ ಬಿಜೆಪಿ ಅನ್ಯಾಯ ಮಾಡುತ್ತ ಬಂದಿದೆ. ಅಭಿವೃದ್ಧಿಪರ ಧ್ವನಿ ಎತ್ತದೆ, ಮತದಾರರಿಗೆ ದ್ರೋಹ ಮಾಡುತ್ತಲೇ ಬಂದಿದೆ. ಜನರು ಬದಲಾವಣೆ ನಿರೀಕ್ಷಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿಗೆ ಬೆಂಬಲ ನೀಡಲು ಮುಂದಾಗಿದ್ದಾರೆ’ ಎಂದರು.

ಹು–ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಅಲ್ತಾಫ್‌ ಹಳ್ಳೂರ, ಜಿಲ್ಲಾ ಕಾಂಗ್ರೆಸ್‌ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ್, ಆಮ್‌ ಆದ್ಮಿ ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಅನಂತಕುಮಾರ್ ಬುಗಡಿ, ಜಿಲ್ಲಾ ಘಟಕದ ಅಧ್ಯಕ್ಷ ಪ್ರವೀಣಕುಮಾರ ನಡಕಟ್ಟಿನ, ಲಕ್ಷಣ ನರಸಾಪುರ, ಪ್ರತಿಭಾ ದಿವಾಕರ, ಬಸವರಾಜ ತೇರದಾಳ, ಎಸ್.ಪಿ. ಹುಬ್ಲೀಕರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT