ಧಾರವಾಡ: ‘ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ ಬಹಳ ಮುಖ್ಯ. ನಿರಂತರ ಅಧ್ಯಯನದಿಂದ ಗುರಿ ತಲುಪಲು ಸಾಧ್ಯವಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಹೇಳಿದರು

ನಗರದ ಜೆಎಸ್ಎಸ್ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದ ಉತ್ಸವ ಸಭಾಭವನದಲ್ಲಿ ಈಚೆಗೆ ಆಯೋಜಿಸಿದ್ದ ಪ್ರಸ್ತುತ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ಕ್ರೀಡಾ ವಿಭಾಗಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ರತಿಯೊಬ್ಬ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬೇಕೆಂಬ ಛಲ ಹಾಗೂ ಗುರಿ ಹೊಂದಬೇಕು. ಶಿಸ್ತುಬದ್ಧ ಯೋಜನಾ ಕ್ರಮ ರೂಢಿಸಿಕೊಂಡು ಉನ್ನತ ಸಾಧನೆಗೆ ಪ್ರಯತ್ನಿಸಬೇಕು. ವಿದ್ಯಾರ್ಥಿ ಜೀವನದಲ್ಲೇ ಭವಿಷ್ಯದ ಬಗ್ಗೆ ಪರಿಕಲ್ಪನೆ ಹೊಂದಬೇಕು’ ಎಂದು ತಿಳಿಸಿದರು.

ಜೆಎಸ್ಎಸ್ ಕಾರ್ಯದರ್ಶಿ ಅಜಿತಪ್ರಸಾದ ಮಾತನಾಡಿ, ‘ಜನತಾ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುತ್ತಿದೆ. ವಿದ್ಯಾರ್ಥಿಗಳು ಕಾಲೇಜಿನಲ್ಲಿರುವ ಗ್ರಂಥಾಲಯ ಸೇರಿದಂತೆ ವಿವಿಧ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ಉನ್ನತ ಸಾಧನೆ ಮಾಡಲು ಶ್ರಮಿಸಬೇಕು’ ಎಂದು ಸಲಹೆ ನೀಡಿದರು.

ಪ್ರಾಚಾರ್ಯ ಪ್ರೊ. ವೆಂಕಟೇಶ ಮುತಾಲಿಕ್ ಅಧ್ಯಕ್ಷತೆ ವಹಿಸಿದ್ದರು. ಜೆಎಸ್ಎಸ್ ಎಂಸಿಎ ಕಾಲೇಜಿನ ನಿರ್ದೇಶಕ ಸೂರಜ್ ಜೈನ್, ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾಧ್ಯೆ, ಉಪ ಪ್ರಾಚಾರ್ಯೆ ಆವಂತಿಕಾ ರೊಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ಜಿನ್ನಪ್ಪ ಕುಂದಗೋಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.