ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Published 6 ಮಾರ್ಚ್ 2024, 4:24 IST
Last Updated 6 ಮಾರ್ಚ್ 2024, 4:48 IST
ಅಕ್ಷರ ಗಾತ್ರ

ಧಾರವಾಡ: ಧಾರವಾಡ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬೆಳಿಗ್ಗೆ ಧಾರವಾಡ ಜೆಎಸ್ಎಸ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.

ರಾಷ್ಟ್ರಧ್ವಜ, ಕನ್ನಡ ಧ್ವಜ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜವನ್ನು ಆರೋಹಣ ಮಾಡಲಾಯಿತು. ಸಾಹಿತಿ ವೆಂಕಟೇಶ ಮಾಚಕನೂರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲಿಂಗರಾಜ ಅಂಗಡಿ, ವಕೀಲ ಪ್ರಕಾಶ ಉಡಕೇರಿ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಅತಿಥಿಗಳು ಮಾತನಾಡಿದರು. ಕನ್ನಡ ಉಳಿಸಿ, ಬೆಳೆಸಲು ಎಲ್ಲರೂ ಪಣತೊಟ್ಟರು. ಜಿಲ್ಲಾ ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಎಲ್ಲರೂ ಶ್ರಮಿಸೋಣ. ಎಲ್ಲರ ಸಹಕಾರವಿರಲಿ ಎಂದು ಕೋರಲಾಯಿತು.

ಸಾಹಿತಿ ಪ್ರೊ. ಕೆ.ಎಸ್.ಶರ್ಮಾ ಸಮ್ಮೇಳನದ ಸರ್ವಾಧ್ಯಕ್ಷರು ಆಗಿದ್ದಾರೆ. ಜೆಎಸ್ಎಸ್ ಶಿಕ್ಷಣ ಸಂಸ್ಥೆ ಆವರಣದಲ್ಲಿನ ಸನ್ನಿಧಿ ಕಲಾಕ್ಷೇತ್ರದಲ್ಲಿ ಎರಡು ದಿನ ಸಮ್ಮೇಳನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT