ಧಾರವಾಡ: ‘ಇಲ್ಲಿಯ ಜಿಲ್ಲಾ ಆಸ್ಪತ್ರೆಗೆ ಎಂಆರ್ಐ ಸ್ಕ್ಯಾನಿಂಗ್ ಯಂತ್ರ ಪೂರೈಸುವಂತೆ ಆರೋಗ್ಯ ಇಲಾಖೆ ಆಯುಕ್ತರಿಗೆ ಪತ್ರ ಬರೆಯಲಾಗುವುದು’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ತಿಳಿಸಿದರು.

ಸೋಮವಾರ ಜಿಲ್ಲಾ ಆಸ್ಪತ್ರೆಯಲ್ಲಿ ವ್ಯವಸ್ಥೆಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ವಿವಿಧೆಡೆಗಳಿಂದ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಬರುತ್ತಾರೆ. ಹೀಗಾಗಿ ಇಲ್ಲಿ ಎಂಆರ್ಐ ಘಟಕವನ್ನು ವ್ಯವಸ್ಥೆ ಮಾಡಲಾಗುವುದು’ ಎಂದರು.

‘ಜಿಲ್ಲಾ ಆಸ್ಪತ್ರೆಯಲ್ಲಿ ತಿಂಗಳಿಗೆ ಸುಮಾರು 550 ಹೆರಿಗೆ ಆಗುತ್ತವೆ. ಬೇರೆ ಕಡೆಯಿಂದ ಬಂದಿದ್ದ ಗಂಭೀರ ಸ್ಥಿತಿಯ 82 ಪ್ರಕರಣಗಳನ್ನು ನಿಭಾಯಿಸಿ ಹೆರಿಗೆ ಮಾಡಿಸಿ ತಾಯಿ ಮತ್ತು ಶಿಶುವಿನ ಜೀವ ಉಳಿಸಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಇಲ್ಲಿನ ಸಖಿ ಕೇಂದ್ರದ ದಾಖಲೆ ಪ್ರಕಾರ ಕಳೆದ 3 ವರ್ಷಗಳಲ್ಲಿ ಇಲ್ಲಿಗೆ 83 ಪೊಕ್ಸೊ ಪ್ರಕರಣಗಳು ಬಂದಿವೆ. ಈ ಪೈಕಿ ಬಾಲ್ಯ ವಿವಾಹವಾಗಿ ಗರ್ಭಿಣಿಯಾದವರು 12, ಅತ್ಯಾಚಾರವಾಗಿ ಗರ್ಭಿಣಿಯಾದವರು 33, ಗರ್ಭಪಾತ ಪ್ರಕರಣ 22 ಇವೆ. ಇಂಥ ಅಮಾನವೀಯ ಪ್ರಕರಣಗಳು ನಡೆಯುತ್ತಿರುವುದು ದುರಂತ’ ಎಂದರು.

ಬಹುತೇಕ ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್ಗಳ ಕೊರತೆ ಇದೆ. ಈ ಜಿಲ್ಲಾ ಆಸ್ಪತ್ರೆಯಲ್ಲೂ ಕೊರತೆ ಇದೆ. ಸರ್ಕಾರ ಋತುಮತಿ ರಜೆ ಘೋಷಿದ್ದರೂ, ಅದನ್ನು ಕೊಡಲಾಗದಷ್ಟು ಒತ್ತಡ ಇಲ್ಲಿದೆ. 50 ನರ್ಸ್ ಹುದ್ದೆಗಳ ಪೈಕಿ 35 ಖಾಲಿ ಇವೆ. 50 ನರ್ಸ್ಗಳ ಕೆಲಸವನ್ನು 35 ಮಂದಿ ಮಾಡಬೇಕಾದ ಸ್ಥಿತಿ ಇದೆ. ನರ್ಸ್, ವೈದ್ಯರ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಉತ್ತರಿಸಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಗಪ್ಪ ಗಾಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಎಚ್.ಎಚ್. ಕುಕನೂರ, ಡಿಎಚ್ಒ ಡಾ.ಎಸ್.ಎಂ. ಹೊನಕೇರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-24-958929176

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.