ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ ಜಿಲ್ಲಾ ಎಸ್.ಡಿ.ಪಿ.ಐ ಪ್ರಧಾನ ಕಾರ್ಯದರ್ಶಿ ವಿಚಾರಣೆ

Last Updated 5 ನವೆಂಬರ್ 2022, 7:33 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಎಸ್.ಡಿ.ಪಿ.ಐ ಸಂಘಟನೆಯ ಧಾರವಾಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ನಾಲಬಂದ್ ಹಾಗೂ ಅವರ ಕುಟುಂಬದ ಸದಸ್ಯರನ್ನು ಶನಿವಾರ ಎನ್.ಐ.ಎ(ರಾಷ್ಟ್ರೀಯ ತನಿಖಾ ಸಂಸ್ಥೆ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿ, ಕೆಲವಷ್ಟು ಮಾಹಿತಿ ಸಂಗ್ರಹಿಸಿದ್ದಾರೆ.

ಹಳೇಹುಬ್ಬಳ್ಳಿ ನೂರಾನಿ ಪ್ಲಾಟ್'ನಲ್ಲಿರುವ ಇಸ್ಮಾಯಿಲ್‌ ಅವರ ನಿವಾಸಕ್ಕೆ ಬೆಳಿಗ್ಗೆ 4.30ಕ್ಕೆ ತೆರಳಿದ ಎನ್ಐಎ ನಾಲ್ವರು ಅಧಿಕಾರಿಗಳ ತಂಡ, 11ರವರೆಗೆ ಕುಟುಂಬದ ಸದಸ್ಯರನ್ನು ವಿಚಾರಣೆಗೆ ಒಳಪಡಿಸಿದೆ. ಪುತ್ರ ತಾಹಿರ್ ನಾಲಬಂದ್ ಬೆಳಗಾವಿಗೆ ತೆರಳಿದ್ದಾನೆ ಎಂದು ಕುಟುಂಬದವರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸೋಮವಾರ(ನ. 7) ಬೆಂಗಳೂರಿನ ಎನ್ಐಎ ಕಚೇರಿಗೆ ಕುಟುಂಬ ಸಮೇತರಾಗಿ ವಿಚಾರಣೆಗೆ ಬರುವಂತೆ ಸೂಚಿಸಿ ನೋಟಿಸ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೇಶದಲ್ಲಿ ಶಾಂತಿ ಕದಡುವ, ಭಯೋತ್ಪಾದನೆ‌ ಕೃತ್ಯಗಳಿಗೆ ಪ್ರಚೋದನೆ ಹಾಗೂ ಹಣಕಾಸಿನ ನೆರವು ನೀಡುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ ಇತ್ತೀಚೆಗೆ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದೆ. ಇಸ್ಮಾಯಿಲ್ ಅವರು ಈ ಮೊದಲು ಅದೇ ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದರು. ಇದೀಗ ಎಸ್.ಡಿ.ಪಿ.ಐ ಸಂಘಟನೆಯ ಜಿಲ್ಲಾ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಯಾವ ಕಾರಣಕ್ಕೆ ಎನ್ಐಎ ಅವರನ್ನು ವಿಚಾರಣೆಗೆ ಒಳಪಡಿಸಿದೆ ಎನ್ನುವುದು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT