ಶನಿವಾರ, ಸೆಪ್ಟೆಂಬರ್ 25, 2021
22 °C

ಧಾರವಾಡ ಜಿಲ್ಲೆಯಲ್ಲಿ ವಾರದಲ್ಲಿ ಎರಡು ದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಹುಬ್ಬಳ್ಳಿ: ಅವಳಿ ನಗರದಲ್ಲಿ ಕೋವಿಡ್ ನಿಯಂತ್ರಣ ಮಾಡುವ ಸಲುವಾಗಿ ಕಠಿಣ ಕ್ರಮಕ್ಕೆ ಮುಂದಾಗಿರುವ ಜಿಲ್ಲಾಡಳಿತ, ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಿದೆ.

ಉಳಿದಂತೆ ಜೂನ್‌ 7ರ ತನಕ ವಾರದಲ್ಲಿ ಐದು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್‌ ವಿಸ್ತರಿಸಲು ತೀರ್ಮಾನಿಸಿದೆ.

ಹೀಗಾಗಿ ಜೂನ್‌ 7ರ ವರೆಗೆ ಪ್ರತಿ ಗುರುವಾರ ಹಾಗೂ ಶುಕ್ರವಾರ ಮಾತ್ರ ಬೆಳಿಗ್ಗೆ 6ರಿಂದ 10 ಗಂಟೆ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

ಈ ಕುರಿತು ಚರ್ಚಿಸಲು ಭಾನುವಾರ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ನೇತೃತ್ವದಲ್ಲಿ ಸಭೆ ನಡೆಯಿತು.

ಸಭೆಯ ಬಳಿಕ ಮಾತನಾಡಿದ ಶೆಟ್ಟರ್‌ ‘ಜಿಲ್ಲೆಯ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ತಜ್ಞರ ಅಭಿಪ್ರಾಯದಂತೆ ಜೂನ್‌ 7ರ ತನಕ ಸಂಪೂರ್ಣ ಲಾಕ್‌ಡೌನ್‌ ವಿಸ್ತರಿಸಲಾಗಿದೆ. ಅ ಅವಧಿಯಲ್ಲಿ ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಸೇವೆಗಳಿಗೆ ಬೆಳಿಗ್ಗೆ 8 ಗಂಟೆ ತನಕ ಮಾತ್ರ ಅವಕಾಶ ಕೊಡಲಾಗಿದೆ. ಸೋಂಕಿನ ಸರಪಳಿ ತುಂಡರಿಸಲು ಕಟ್ಟುನಿಟ್ಟಿನ ಕ್ರಮ ಅಗತ್ಯವಾಗಿದ್ದು, ಸಾರ್ವಜನಿಕರು ಮನೆಯಲ್ಲಿಯೇ ಇದ್ದು ಸಹಕರಿಸಬೇಕು’ ಎಂದು ಕೋರಿದರು.

ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ, ಹುಬ್ಬಳ್ಳಿ–ಧಾರವಾಡ ಪೊಲೀಸ್‌ ಕಮಿಷನರ್‌ ಲಾಬೂರಾಮ್‌, ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ, ಹುಬ್ಬಳ್ಳಿ ತಹಶೀಲ್ದಾರ್‌ ಶಶಿಧರ ಮಾಡ್ಯಾಳ ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು