ಧಾರವಾಡ: ಜಿಲ್ಲೆಯಲ್ಲಿ ಬೀದಿ ನಾಯಿಗಳ ನಿಯಂತ್ರಣ ಹಾಗೂ ನಿರ್ವಹಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಫೆ. 22 ರಂದು ಕರ್ನಾಟಕ ಕಾಲೇಜು (ಕೆಸಿಡಿ) ಆವರಣದಲ್ಲಿ ಶ್ವಾನಗಳ ಪ್ರದರ್ಶನ, ಪೆಟ್ ಫ್ಯಾಶನ್ ಶೋ ಹಾಗೂ ಬೀದಿ ಶ್ವಾನ (ನಾಯಿ) ಮರಿಗಳನ್ನು ದತ್ತು ಪಡೆಯುವ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಪಶುವೈದ್ಯಕೀಯ ಸಂಘದ ಜಿಲ್ಲಾ ಘಟಕ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಶ್ವಾನ ಮಾಲೀಕರು ಫೆ. 20ರೊಳಗೆ ಹೆಸರು ನೊಂದಾಯಿಸಿಕೊಳ್ಳಬೇಕು ಹಾಗೂ ಮಾಹಿತಿಗಾಗಿ ಮೊ: 9845459130 ಸಂಪರ್ಕಿಸಬಹುದು ಎಂದರು.

ಬೀದಿ ಶ್ವಾನ ಮರಿ ದತ್ತು ಪಡೆಯುವ ಆಸಕ್ತರು https://scan.page/75SeGI ವೆಬ್ಸೈಟ್ನಲ್ಲಿ ನೋಂದಾಯಿಸಿಕೊಳ್ಳಬಹುದು. ಮಾಹಿತಿಗಾಗಿ ಮೊ: 7022298763 ಸಂಪರ್ಕಿಸಬಹುದು ಎಂದರು. ಮುಖ್ಯ ಪಶುವೈದ್ಯಾಧಿಕಾರಿ ರಮೇಶ ಹೆಬ್ಬಳ್ಳಿ, ಡಾ.ಬಿ.ಪಿ.ಹಿರೇಮಠ, ಡಾ.ಲಿಂಗರಾಜ ಪಿ.ಎಸ್, ಹ್ಯೂಮನ್ ವರ್ಲ್ಡ್ ಫಾರ್ ಅನಿಮಲ್ಸ್ ಸಂಸ್ಥೆಯ ರಮೇಶ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.