ಧಾರವಾಡ: ‘ಡೊನೇಷನ್’ ವಸೂಲಿ ಮಾಡುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಬೇಕು. ‘ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ್ ಪ್ರಾಧಿಕಾರ’ (ಡೊನೇಷನ್ ವಿರೋಧಿ ಸಮಿತಿ) ರಚಿಸಬೇಕು ಎಂದು ವಿದ್ಯಾರ್ಥಿ ಫೆಡರೇಷನ್ ಆಫ್ ಇಂಡಿಯಾ (ಎಸ್ಎಫ್ಐ) ಜಿಲ್ಲಾ ಸಮಿತಿಯವರು ಜಿಲ್ಲಾಧಿಕಾರಿ ಕಚೇರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದರು.

‘ಜಿಲ್ಲಾ ಮತ್ತು ತಾಲ್ಲೂಕುಮಟ್ಟದಲ್ಲಿಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆ ಮುಖ್ಯಸ್ಥರು ಮತ್ತು ಶಿಕ್ಷಣ ಇಲಾಖೆ ಮುಖ್ಯಸ್ಥರು, ಪಾಲಕರು, ವಿದ್ಯಾರ್ಥಿ ಸಂಘಟನೆ ಪ್ರತಿನಿಧಿಗಳ ಜಂಟಿ ಸಭೆ ಆಯೋಜಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿರುವ ಕೇಂದ್ರೀಯ ಶಾಸನ ಜಾರಿ ತರಬೇಕು. ನಿಗದಿಗೊಳಿಸಿರುವ ಪ್ರವೇಶ ಶುಲ್ಕದ ವಿವರವನ್ನು ಮಾಧ್ಯಮ, ಭಿತ್ತಿಪತ್ರ, ಕರಪತ್ರ ಮೂಲಕ ಪ್ರಚುರಪಡಿಸಬೇಕು’ ಎಂದು ಮನವಿ ಮಾಡಿದರು.

‘ಶಿಕ್ಷಣ ಸಂಸ್ಥೆಗಳು ತಿಂಗಳಿಗೊಮ್ಮೆ ಪಾಲಕರ ಸಭೆ ಕರೆದು ಚರ್ಚಿಸಬೇಕು. ಜಿಲ್ಲಾಧಿಕಾರಿಯವರು ಡೊನೇಷನ್ ನಿಯಂತ್ರಣಕ್ಕೆ ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್ ಪ್ರಾಧಿಕಾರ ರಚನೆ ಕುರಿತು 15 ದಿನಗಳ ಒಳಗಾಗಿ ಪಾಲಕರು ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು. ಶಿಕ್ಷಣ ಇಲಾಖೆಯ ಮುಖ್ಯಸ್ಥರು, ವಿದ್ಯಾರ್ಥಿ ಸಂಘಟನೆಯ ಪ್ರತಿನಿಧಿಗಳ ಜಂಟಿಸಭೆ ನಡೆಸಿ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.

ಅರುಣ್ ಕುಮಾರ್ ನಾಗವತ್, ನಾಗರಾಜ ಛಲವಾದಿ, ಮಮತಾ ಕೊಡದ, ಕಾರ್ಯದರ್ಶಿ ರಾಧಿಕಾ ಲಮಾಣಿ, ಕಾಂಚನಾ, ಗುರು ಬಸವರಾಜ್, ನಾಗರಾಜ್, ಕಿರಣ್ ಕುಮಾರ್, ಸತೀಶ್, ಗಿರೀಶ್, ವಿನೋದ, ವೆಂಕಟೇಶ್, ಮಮತಾ ಮುಂಡರಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-24-1125415625

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.