ಧಾರವಾಡ: ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜ, ಕೃಷಿ ಚಟುವಟಿಕೆಗೆ ಪೆಟ್ರೋಲ್, ಡೀಸೆಲ್ ಸಮರ್ಪಕವಾಗಿ ಪೂರೈಸಬೇಕು, ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ₹ 5 ಲಕ್ಷದವರೆಗೆ ಸಾಲ ನೀಡಬೇಕು ಎಂದು ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಜಿಲ್ಲಾ ಘಟಕದವರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು ‘ಸಮರ್ಪಕವಾಗಿ ಗೊಬ್ಬರ, ಬೀಜ ಒದಗಿಸಿ’, ‘ಯಾವುದೇ ನಿರ್ಬಂಧ ವಿಧಿಸದೆ ಕೃಷಿ ಚಟುವಟಿಕೆಗೆ ಡೀಸೆಲ್, ಪೆಟ್ರೋಲ್ ಒದಗಿಸಿ’ ಫಲಕಗಳನ್ನು ಪ್ರದರ್ಶಿಸಿದರು.

ಗೊಬ್ಬರ ಮಳಿಗೆ ಮತ್ತು ರೈತ ಸಂಪರ್ಕ ಕೇಂದ್ರಗಳ ಮುಂದೆ ರೈತರು ಬೀಜ, ಗೊಬ್ಬರಕ್ಕಾಗಿ ಸಾಲಗಟ್ಟಿ ನಿಲ್ಲುವಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯೂರಿಯಾ ಡಿಎಪಿ ಗೊಬ್ಬರ ಮತ್ತು ಬೀಜ ಪೂರೈಸಲು ವಿಫಲವಾಗಿವೆ ಎಂದು ಪ್ರತಿಭಟನಾಕಾರರು ದೂರಿದರು.

ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವುದಕ್ಕೆ ಕಡಿವಾಣ ಹಾಕಬೇಕು. ಯೂರಿಯಾ ಗೊಬ್ಬರದ ಜತೆ ಜಿಂಕ್ ಇತರ ಗೊಬ್ಬರ ನೀಡುವುದನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆ ಜಿಲ್ಲಾಧ್ಯಕ್ಷೆ ದೀಪಾ ಧಾರವಾಡ, ಗೋವಿಂದ ಕೃಷ್ಣಪ್ಪನವರ್, ಶರಣು ಗೋನವಾರ, ಕಲ್ಲಪ್ಪ ಮೂಷಣ್ಣವರ , ವಿಜಯಲಕ್ಷ್ಮಿ ನಿಕ್ಕಮ್, ರುಕುಮವ್ವ, ಹುಸೇನ್ ಸಾಬ್ ಇದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-24-1587635894

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.