ಧಾರವಾಡ: ‘ಶಿಗ್ಗಾವಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಸರ್ಕಾರ ಈವರೆಗೆ ನ್ಯಾಯಸಮ್ಮತ ತನಿಖೆ ನಡೆಸಿಲ್ಲ’ ಎಂದು ಕರ್ನಾಟಕ ರಾಜ್ಯ ಜಾನಪದ ಸ್ನಾತಕೋತ್ತರ ಹಾಗೂ ಸಂಶೋಧಕರ ಒಕ್ಕೂಟದ ಅಧ್ಯಕ್ಷ ಶಿವಸೋಮಪ್ಪ ನಿಟ್ಟೂರು ಆರೋಪಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜುಲೈ 18 ಮತ್ತು 19 ರಂದು ವಿಶ್ವವಿದ್ಯಾಲಯದ ಎದುರು ಅಕ್ರಮ ನೇಮಕಾತಿ ಮೂರನೇ ವರ್ಷದ ಕರಾಳ ದಿನಾ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ’ ಎಂದರು.

‘ಜಾನಪದ ವಿವಿ ಕುಲಪತಿ ಟಿ.ಎಂ.ಭಾಸ್ಕರ ಜುಲೈ 19 ರಂದು ನಿವೃತ್ತಿಯಾಗುತ್ತಾರೆ. ಅವರನ್ನು ತನಿಖೆಗೆ ಒಳಪಡಿಸಬೇಕು. ಈ ಅಕ್ರಮ ನೇಮಕಾತಿಯ ತನಿಖೆಗೆ ನೇಮಿಸಿರುವ ಮೂರು ತನಿಖಾ ತಂಡಗಳಿಂದಲೂ ತನಿಖೆ ಪೂರ್ಣ ಆಗಿರುವ ಬಗ್ಗೆ ಮಾಹಿತಿ ಇಲ್ಲ. ತನಿಖಾ ತಂಡಗಳ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗದಂತೆ ರಾಜಕಾರಣಿಯೊಬ್ಬರು ತಡೆದಿದ್ದಾರೆಂಬ ಆರೋಪಗಳು ಕೇಳಿಬಂದಿದೆ’ ಎಂದು ತಿಳಿಸಿದರು.

ಈಗಲಾದರೂ ಸರ್ಕಾರ ಎಚ್ಚೆತ್ತು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿಸ್ಥರನ್ನು ಪತ್ತೆ ಹಚ್ಚಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ.ಎಂ.ದುಗಾಣಿ, ಉಪಾಧ್ಯಕ್ಷ ಎಸ್.ನಾಗರಾಜ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-24-1713048198

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.