ಧಾರವಾಡ: ನಗರದ ಕಮಲಾಪುರದ ಸರ್ಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳನ್ನು ವ್ಯಕ್ತಿಯೊಬ್ಬರು ಅಪಹರಿಸಿದ್ದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಂಗಳವಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

‘ಪ್ರಜಾವಾಣಿ’ಯ ವರದಿ (ಶಾಲೆಯಿಂದ ಇಬ್ಬರು ಮಕ್ಕಳ ಅಪಹರಣ) ಆಧರಿಸಿ ದೂರು ದಾಖಲಿಸಿಕೊಳ್ಳಲಾಗಿದೆ. ಆರೋಪಿ ಬಂಧನ ಕುರಿತು ಏಳು ದಿನಗಳೊಳಗೆ ಮಾಹಿತಿ ನೀಡುವಂತೆ ಹುಬ್ಬಳ್ಳಿ–ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ಗೆ ನಿರ್ದೇಶನ ನೀಡಿದೆ.

ಶಾಲೆಗೆ ಭೇಟಿ ನೀಡಿ ವರದಿ ನೀಡುವಂತೆ ಡಿಡಿಪಿಐ, ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಿ ವರದಿ ನೀಡುವಂತೆ ಆಯೋಗದ ಅಧ್ಯಕ್ಷ ಶಶಿಧರ ಎಸ್. ಕೋಸಂಬೆ ಅವರು ಸೂಚನೆ ನೀಡಿದ್ದಾರೆ.

‘ಶಾಲೆಯಿಂದ ಮಕ್ಕಳನ್ನು ಅಪಹರಿಸಿದ್ದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಹುಬ್ಬಳ್ಳಿಯ ‘ಕಿಮ್ಸ್’ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಆತ ಗುಣಮುಖವಾದ ಬಳಿಕ ವಿಚಾರಣೆ ನಡೆಸಲಾಗುವುದು’ ಎಂದು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.