ಧಾರವಾಡ: ‘ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದೇನೆ’ ಎಂದು ಬಿಜೆಪಿ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಸುಧೀಂದ್ರ ದೇಶಪಾಂಡೆ ತಿಳಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯಿಂದ ಸ್ಪರ್ಧಿಸುವ ಪ್ರಬಲ ಆಕಾಂಕ್ಷೆ ಇತ್ತು. ಆದರೆ, ಬಿಜೆಪಿ ಎಸ್.ವಿ. ಸಂಕನೂರ ಅವರನ್ನು ಮತ್ತೆ ಕಣಕ್ಕಿಳಿಸಲು ನಿರ್ಧರಿಸಿದೆ. ಹೀಗಾಗಿ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ’ ಎಂದರು.

‘ಎಸ್.ವಿ. ಸಂಕನೂರ ಅವರು ಎರಡು ಬಾರಿ ಆಯ್ಕೆಯಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿದೆ. ಈ ಬಾರಿ ಬಿಜೆಪಿ ಬೇರೆಯವರಿಗೆ ಅವಕಾಶ ನೀಡಬೇಕಿತ್ತು. 2022ರಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುವ ಅವಕಾಶ ಕೈತಪ್ಪಿತ್ತು. ಬಸವರಾಜ ಹೊರಟ್ಟಿ ಸ್ಪರ್ಧಿಸಿದ್ದರು. ಬಿಜೆಪಿಯಲ್ಲಿ ಇರುತ್ತೇನೆ, ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ’ ಎಂದು ತಿಳಿಸಿದರು.

‘ಸಿಂಡಿಕೇಟ್ ಸದಸ್ಯನಾಗಿ ಕಾರ್ಯನಿರ್ವಹಿಸಿದ, ವಿವಿಧ ಚುನಾವಣೆಯಲ್ಲಿ ಪಕ್ಷ ವಹಿಸಿದ್ದ ಜವಾಬ್ದಾರಿ ನಿರ್ವಹಿಸಿದ ಅನುಭವ ಇದೆ. ಆರ್ಎಸ್ಎಸ್ನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದೇನೆ. ಧಾರವಾಡ, ಹಾವೇರಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಓಡಾಡಿದ್ದೇನೆ. ಮತದಾರರು ಬೆಂಬಲ ನೀಡುವ ವಿಶ್ವಾಸ ಇದೆ’ ಎಂದರು.

ನರಸಿಂಗರಾವ್ ಸೋಮಲಾಪುರ, ಬಸವರಾಜ ಶಿರಸಂಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-24-414019102

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.