ಧಾರವಾಡ: ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಕಿರೇಸೂರ ಗ್ರಾಮದಲ್ಲಿ ನಡೆದಿದ್ದ ಕಳವು ಹಾಗೂ ಹಾವೇರಿ ಜಿಲ್ಲೆಯ ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಚೆಗೆ ಚಿನ್ನದ ಅಂಗಡಿಗಳಲ್ಲಿ ನಡೆದ ಕಳವು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ.

ಇಬ್ಬರು ಆರೋಪಿಗಳನ್ನು ಬಂಧಿಸಿ ₹ 1.15 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಹಾಗೂ ವಾಹನ ವಶಪಡಿಸಿಕೊಂಡಿದ್ದಾರೆ. ಲಕ್ಷೇಶ್ವರ ತಾಲ್ಲೂಕಿನ ಬಾಳೆಹೊಸೂರಿನ ಶಿವರಾಜ ಹನಮಂತಪ್ಪ ಹಾಗೂ ಸಿಂಧನೂರು ತಾಲ್ಲೂಕಿನ ಅಂಬಾಮಠದ ಅಶೋಕ ಅಲಿಯಾಸ್ ರಮೇಶ ಶಿವಪ್ಪ ಕೊಂಚಿಕೊರವರ ಬಂಧಿತರು. ಆರೋಪಿಗಳಿಂದ 310 ಗ್ರಾಂ ಚಿನ್ನಾಭರಣ, 26 ಕೆ.ಜಿ ಬೆಳ್ಳಿ ಆಭರಣ ಹಾಗೂ ತೆಲಂಗಾಣ ರಾಜ್ಯದಲ್ಲಿ ಕಳವು ಮಾಡಿದ್ದ ಒಂದು ಬೊಲೆರೊ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-24-151194422

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.