ಧಾರವಾಡ: ‘ವಿದ್ಯಾರ್ಥಿನಿಯರ ಹಾಸ್ಟೆಲ್ಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಿ ವರದಿ ಸಲ್ಲಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹಿಳಾ ಸ್ಪಂದನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಹಾಸ್ಟೆಲ್ಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ. ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ, ಸ್ಯಾನಿಟರಿ ಕಿಟ್, ಕಾವಲುಗಾರ ಕೊರತೆ ಇದೆ ಎಂದರು.

ಶಾಲೆ, ಕಾಲೇಜು, ಬಸ್ ನಿಲ್ದಾಣ, ಸಾರ್ವಜನಿಕ ಸ್ಥಳಗಳಲ್ಲಿ ಮಹಿಳಾ ಮತ್ತು ಮಕ್ಕಳ ಸಹಾಯವಾಣಿ ಸಂಖ್ಯೆ ಫಲಕ ಅಳವಡಿಸಬೇಕು. ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ ಜಾಗೃತಿ ಕಾರ್ಯಕ್ರಮಗಳನ್ನು ನಿಯಮಿತವಾಗಿ ಆಯೋಜಿಸಬೇಕು ಎಂದರು.

‘ಜಿಲ್ಲೆಯ ವಿವಿಧ ಸರ್ಕಾರಿ ತಾಲ್ಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೂಲ ಸೌಲಭ್ಯಗಳ ಕೊರತೆ ಇದೆ. ಅಣ್ಣಿಗೇರಿ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ ಇದೆ. ಹೆರಿಗೆ ಸಂದರ್ಭದಲ್ಲೇ ವಿದ್ಯುತ್ ಕಡಿತವಾಗಿದೆ. ಅಣ್ಣಿಗೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೀರಿನ ವ್ಯವಸ್ಥೆ ಸರಿಯಾಗಿಲ್ಲ. ಸ್ವಚ್ಛತೆ ಇಲ್ಲ. ಆಸ್ಪತ್ರೆ ಆವರಣದಲ್ಲಿ ಗಿಡಗಂಟಿಗಳು ಬೆಳೆದಿವೆ ಎಂದು ಸಾರ್ವಜನಿಕರು ದೂರು ನೀಡಿದ್ದಾರೆ. ಕೂಡಲೇ ಸಮಸ್ಯೆ ಸರಿಪಡಿಸಬೇಕು’ ಎಂದು ಡಿಎಚ್ಒಗೆ ಸೂಚನೆ ನೀಡಿದರು.

‘ಹುಬ್ಬಳ್ಳಿಯ ಕೆಎಂಸಿಯಲ್ಲಿ ತಿಂಗಳಿಗೆ 2,500ಕ್ಕೂ ಹೆಚ್ಚು ಹೆರಿಗೆಗಳು ಆಗುತ್ತಿವೆ. ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಸಮರ್ಪಕ ಹಾಸಿಗೆ ವ್ಯವಸ್ಥೆ ಇಲ್ಲ. ಹಾಸಿಗೆ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.

‘ಹಳ್ಳಿಗಳಲ್ಲಿ ಕಿರಾಣಿ ಅಂಗಡಿಗಳಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳಿಗೆ. ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಬೇಕು’ ಎಂದರು.

ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾತನಾಡಿ, ‘ಮದ್ಯ ಅಕ್ರಮ ಮಾರಾಟವನ್ನು ತಡೆಗಟ್ಟುವ ಉದ್ದೇಶದಿಂದ ರಾತ್ರಿ ವೇಳೆ ಹಳ್ಳಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಡಿಸಿಪಿ ಶ್ರುತಿ ಎನ್.ಎಸ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಎಚ್.ಎಚ್. ಕುಕನೂರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-24-1161701560

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.