ಧಾರವಾಡ: ‘ಹುಬ್ಬಳ್ಳಿ ಗ್ರಾಮೀಣ, ನವಲಗುಂದ, ಅಣ್ಣಿಗೇರಿ, ಗುಡಗೇರಿ ಹಾಗೂ ಕುಂದಗೋಳ ಭಾಗವನ್ನು ಒಳಗೊಂಡಂತೆ ಹುಬ್ಬಳ್ಳಿಯಲ್ಲಿ ನೂತನ ಡಿಎಸ್ಪಿ ಕಚೇರಿ ಸ್ಥಾಪಿಸಲು ಆರ್ಥಿಕ ಇಲಾಖೆಯು ಅನುಮೋದನೆ ನೀಡಿದೆ’ ಎಂದು ಶಾಸಕ ಎನ್.ಎಚ್. ಕೋನರಡ್ಡಿ ತಿಳಿಸಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಆವರಣದಲ್ಲಿ ಗುರುವಾರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಖರೀದಿಸಿದ ಬೊಲೊರೊ ವಾಹನವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರ ಮೂಲಕ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಹುಬ್ಬಳ್ಳಿಯಲ್ಲಿ ನೂತನ ಡಿಎಸ್ಪಿ ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಕೋರ ಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ, ಕಚೇರಿ ಸ್ಥಾಪನೆಗೆ ಆರ್ಥಿಕ ಇಲಾಖೆಯಿಂದ ಅನುಮೋದನೆ ಕೊಡಿಸಿದ್ದಾರೆ. ಇನ್ನೊಂದು ವಾರದೊಳಗೆ ಈ ಕುರಿತು ಅಧಿಕೃತ ಆದೇಶ ಹೊರಬೀಳಲಿದೆ’ ಎಂದರು.

‘ಜಿಲ್ಲೆಯ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಹೆಚ್ಚು ವರಿಯಾಗಿ ಐದು ಬುಲೆರೋ ವಾಹನಗಳ ಅಗತ್ಯವಿದ್ದು, ಈ ಕುರಿತು ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗಿದೆ’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-24-17909920

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.