ಧಾರವಾಡ: ಜೂಜು, ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಅಧಿಕಾರಿಗಳಿಗೆ ಶಾಸಕ ವಿನಯ ಕುಲಕರ್ಣಿ ಸೂಚನೆ ನೀಡಿದರು.

ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರಿನ ಪರಿವೀಕ್ಷಣಾ ಮಂದಿರದಲ್ಲಿ ಮಂಗಳವಾರ ಧಾರವಾಡ ತಾಲ್ಲೂಕುಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮಗಳಲ್ಲಿ ಡಬ್ಬಿ ಅಂಗಡಿಗಳು, ಕಿರಾಣಿ ಅಂಗಡಿಗಳಲ್ಲೂ ಮದ್ಯ ಮಾರಾಟ ಮಾಡುತ್ತಾರೆ. ಗಾಂಜಾ ಮಾರಾಟ ನಡೆಯುತ್ತಿದೆ. ಇಸ್ಪೀಟು, ಮಟ್ಕಾ, ಒಸಿ, ಜೂಜುಗಳ ನಡೆಯುತ್ತಿವೆ ಎಂಬ ದೂರುಗಳು ಇವೆ. ಪೊಲೀಸ್ ಕಾನ್ಸ್ಟೆಬಲ್ಗಳೇ ಜೂಜುಕೋರರಿಗೆ ಮೀಟರ್ ಬಡ್ಡಿಗೆ ಹಣ ನೀಡಿ ಜೂಜಾಟದಲ್ಲಿ ತೊಡಗಿಸುತ್ತಾರೆಂಬ ದೂರುಗಳು ಇವೆ. ಈ ದಂಧೆಗಳಿಗೆ ಕಡಿವಾಣ ಹಾಕಬೇಕು’ ಎಂದರು.

‘ಅಬಕಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆಯವರು ಜಂಟಿ ಕಾರ್ಯಚರಣೆ ನಡೆಸಬೇಕು. ಈಗ ಐಪಿಎಲ್ ಶುರುವಾಗಿದೆ. ಬೆಟ್ಟಿಂಗ್ ನಡೆಯದಂತೆ ನಿಗಾ ವಹಿಸಬೇಕು. ದಂಧೆಗಳಲ್ಲಿ ತೊಡಗಿರುವವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಗ್ರಾಮಗಳಲ್ಲಿ ಪೈಪ್ಲೈನ್ ಕಾಮಗಾರಿಗಾಗಿ ರಸ್ತೆ ಅಗೆದು ನಂತರ ಅದನ್ನು ಸರಿಪಡಿಸದ ಗುತ್ತಿಗೆದಾರರ ಟೆಂಡರ್ ರದ್ದುಪಡಿಸಿ, ಹೊಸದಾಗಿ ಟೆಂಡರ್ ಆಹ್ವಾನಿಸಬೇಕು. ಪೈಪ್ಲೈನ್ ನೀರಿನ ಹರಿವು ಸಮಸ್ಯೆಯಾಗದಂತೆ ಗಮನ ಹರಿಸಬೇಕು. ನೀರು ವ್ಯರ್ಥ ಮಾಡದಂತೆ ಪ್ರತಿ ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು’ ಎಂದು ಅವರು ತಿಳಿಸಿದರು.

‘ಧಾರವಾಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 63 ಜಲಜೀವನ್ ಮಿಷನ್ (ಜೆಜೆಎಂ) ಕಾಮಗಾರಿಗಳ ಪೈಕಿ 55 ಮುಗಿದಿವೆ. 8 ಬಾಕಿ ಇವೆ. ಹೊಟ್ಟಿ, ಬೇಲೂರು, ಲೋಕೂರು, ಶಿಬಾರಗಟ್ಟಿ ಸಹಿತ ಒಟ್ಟು 11 ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಲಾಗಿದೆ’ ಎಂದು ಗ್ರಾಮೀಣ ನೀರು ಸರಬರಾಜು ವಿಭಾಗದ ಎಂಜಿನಿಯರ್ ತಿಳಿಸಿದರು.

‘ಶಿಬಾರಗಟ್ಟಿ, ಲೋಕೂರಿನ ಶುದ್ಧ ನೀರಿನ ಘಟಕಗಳು (ಆರ್ಒ) ಬಂದ್ ಆಗಿವೆ. ಅವುಗಳನ್ನು ದುರಸ್ತಿ ಮಾಡಿಸಿ ಕಾರ್ಯನಿರ್ವಹಿಸುವಂತೆ ಮಾಡಬೇಕು. ಪೈಪ್ಲೈನ್ ಕಾಮಗಾರಿಗಾಗಿ ಅಗೆದಿರುವ ರಸ್ತೆಗಳನ್ನು ಸರಿಯಾಗಿ ದುರಸ್ತಿ ಮಾಡಿಸಬೇಕು’ ಎಂದರು.

ತಾಲ್ಲೂಕು ಕೆಡಿಪಿ ಸಭೆ ನಾಮ ನಿರ್ದೇಶನ ಸದಸ್ಯರನ್ನು ಸನ್ಮಾನಿಸಲಾಯಿತು. ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಅಧ್ಯಕ್ಷೆ ಶಿವಲೀಲಾ ಕುಲಕರ್ಣಿ, ತಹಶೀಲ್ದಾರ್ ಡಾ.ಡಿ.ಎಚ್.ಹೂಗಾರ ಇದ್ದರು.

ಕಾಮಗಾರಿ ಪೂರ್ಣಕ್ಕೆ 6 ತಿಂಗಳ ಗಡುವು

ಉಳ್ಳಿಗೇರಿ ಬಳಿ ನೀರು ಶುದ್ಧೀಕರಣ ಘಟಕ (ಮಲಪ್ರಭಾ ಕಾಲುವೆಯಿಂದ ನೀರು ಪೂರೈಕೆ) ನಿರ್ಮಾಣ ಕಾಮಗಾರಿಯನ್ನು ಇನ್ನು ಆರು ತಿಂಗಳಲ್ಲಿ ಮುಗಿಸುವಂತೆ ಸೂಚನೆ ನೀಡಲಾಗಿದೆ ಎಂದು ಶಾಸಕ ವಿನಯ ಕುಲಕರ್ಣಿ ತಿಳಿಸಿದರು.

‘ಕಾಮಗಾರಿ ಅವಧಿ ವಿಸ್ತರಿಸುವಂತೆ ಗುತ್ತಿಗೆದಾರರು ಮನವಿ ಮಾಡಿದ್ಧಾರೆ. ಆರು ತಿಂಗಳೊಳಗೆ ಮುಗಿಸುವಂತೆ ಸೂಚನೆ ನೀಡಲಾಗಿದೆ. ಕಿತ್ತೂರು ಕರ್ನಾಟಕದ ಅಭಿವೃದ್ಧಿ ನಿಟ್ಟಿನಲ್ಲಿ ಈ ಭಾಗದ ಶಾಸಕರಿಗೆ ವಾರ್ಷಿಕ ತಲಾ ₹ 50 ಕೋಟಿ ಅನುದಾನ ನೀಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗಿದೆ. ಹು–ಧಾ ಮಹಾನಗರ ಪಾಲಿಕೆ ವಿಭಜಿಸಿ ಪ್ರತ್ಯೇಕ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಸರ್ಕಾರ ನಿರ್ಧರಿಸಿ ಪ್ರಸ್ತಾವವನ್ನು ರಾಜ್ಯಪಾಲರ ಅನುಮೋದನೆ ಕಳಿಸಲಾಗಿದೆ. ರಾಜ್ಯಪಾಲರು ಇನ್ನು ಅನುಮೋದನೆ ನೀಡಿಲ್ಲ. ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸುವುದು ನಮ್ಮ ಗುರಿ’ ಎಂದರು.

‘ಅವಳಿನಗರದಲ್ಲಿ ನಿವೇಶನ ಖರೀದಿದಿಸುವವರಿಂದ ಬಿಆರ್ಟಿಎಸ್ ಸೆಸ್ ವಸೂಲಿ ಮಾಡುತ್ತಿರುವ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.