ಧಾರವಾಡ: ಮದ್ಯ ಅಕ್ರಮ ಮಾರಾಟ, ಅನಧಿಕೃತ ಮದ್ಯ ಅಂಗಡಿಗಳನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಸ್ನೇಹಲ್ ಅವರು ಪೊಲೀಸರು ಮತ್ತು ಅಬಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಅಬಕಾರಿ ಇಲಾಖೆಯ ಸ್ಥಾಯಿ ಸಮಿತಿ ಸಭೆಯಲ್ಲಿ ಮಾತನಾಡಿದರು.

‘ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮದ್ಯ ಅಕ್ರಮವಾಗಿ ಮಾರಾಟ ನಡೆಯುತ್ತಿದೆ ಎಂಬ ದೂರುಗಳು ಇವೆ. ವಿಶೇಷ ತಂಡಗಳನ್ನು ರಚಿಸಿ ಎಲ್ಲ ಕಡೆ ತಪಾಸಣೆ ನಡೆಸಬೇಕು. ಅಕ್ರಮ ಚಟುವಟಿಕೆಗಳನ್ನು ತಡೆಯಲು ಎಲ್ಲರೂ ಸಹಕರಿಸಬೇಕು’ ಎಂದರು.

‘ಉದ್ಯೋಗ ಸಮಸ್ಯೆ ಇತರ ಕಾರಣಗಳಿಂದ ಯುವಜನರು ವ್ಯಸನಗಳ ಗೀಳು ಬೆಳೆಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಇದೆ. ದುರಭ್ಯಾಸ ತಡೆಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಅರಿವು ಮೂಡಿಸಬೇಕು. ವ್ಯಸನಿ ಯುವಜನರನ್ನು ಗುರುತಿಸಿ ಸಮಾಲೋಚನೆ ಹಾಗೂ ಪುನರ್ವಸತಿ ಸೇವೆ ಕಲ್ಪಿಸಿ ಸರಿ ದಾರಿಗೆ ತರಲು ಪ್ರಯತ್ನಿಸಬೇಕು’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮಾತನಾಡಿ, ‘ಮಾದಕ ಪದಾರ್ಥಗಳ ಗೀಳು ಬೆಳೆಸಿಕೊಂಡಿರುವವರು, ಅಕ್ರಮ ಚಟುವಟಿಕೆ ನಡೆಸುವವರನ್ನು ಗುರುತಿಸಿ, ಅವರ ಚಲನವಲನಗಳ ಮೇಲೆ ನಿಗಾ ಇಡಲಾಗುವುದು. ವ್ಯಸನಿಗಳಿಗೆ ಮಾದಕ ಪದಾರ್ಥಗಳ ಹಾನಿ ಬಗ್ಗೆ ಅರಿವು ಮೂಡಿಸಲಾಗುತ್ತಿದೆ’ ಎಂದರು.

ಅಬಕಾರಿ ಇಲಾಖೆ ಉಪಆಯುಕ್ತ ರಮೇಶಕುಮಾರ ಎಚ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಎಸಿಪಿ ಪ್ರಶಾಂತ ಸಿದ್ದನಗೌಡರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಎಚ್.ಎಚ್.ಕುಕನೂರ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಅಜಯ ಎನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ. ಹೊನಕೇರಿ, ಅಬಕಾರಿ ಅಧಿಕಾರಿ ಮಂಜುನಾಥ ಅರೆಗುಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-24-64860460

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.