ಧಾರವಾಡ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಬೇಕು ಎಂದು ಒತ್ತಾಯಿಸಲು ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ ಜತೆ ಚರ್ಚೆಗೆ ಜೂನ್ 9ರೊಳಗೆ ಅವಕಾಶ ಕಲ್ಪಿಸಬೇಕು. ಭೇಟಿಗೆ ಅವಕಾಶ ಕಲ್ಪಿಸದಿದ್ದರೆ ನಗರದಲ್ಲಿ ಪ್ರತಿಭಟನೆ ನಡೆಸುತ್ತೇವೆ’ ಎಂದು ಹಿರಿಯ ವಕೀಲ ಬಿ.ಡಿ.ಹಿರೇಮಠ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ ಭೇಟಿಗೆ ಅವಕಾಶ ಕೋರಿ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸುತ್ತೇವೆ. ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 9.8 ಲಕ್ಷ ಹಾಗೂ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ 2.8 ಲಕ್ಷ ಹುದ್ದೆಗಳು ಖಾಲಿ ಇವೆ. ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರಧಾನಿ, ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸುತ್ತೇವೆ’ ಎಂದು ಹೇಳಿದರು.

‘ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ಜೂನ್ 3ರಂದು ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನೀಡಿಲ್ಲ. ನೇಮಕಾತಿ ಆರಂಭಿಸಿದ್ದರೆ ಪ್ರತಿಭಟನೆ ನಡೆಸಬೇಕಾದ ಅನಿವಾರ್ಯ ಎದುರಾಗುತ್ತಿರಲಿಲ್ಲ. ಸರ್ಕಾರ ತಕ್ಷಣವೇ ಅಧಿಸೂಚನೆ ಪ್ರಕಟಿಸಬೇಕು’ ಎಂದು ಆಗ್ರಹಿಸಿದರು.

‘ವಿವಿಧ ನೇಮಕಾತಿ ಪರೀಕ್ಷೆಗಳಿಗೆ ತಯಾರಿಯಲ್ಲಿ ತೊಡಗಿರುವ ಸ್ಪರ್ಧಾರ್ಥಿಗಳಿಗೆ ಅನುಕೂಲವಾಗುವಂತೆ ನಗರದಲ್ಲಿ ‘ಇ ಲೈಬ್ರರಿ’ ಸ್ಥಾಪಿಸಬೇಕು. ಸ್ಪರ್ಧಾರ್ಥಿಗಳಿಗೆ ಪ್ರತಿ ತಿಂಗಳು ಕೇಂದ್ರ ಸರ್ಕಾರ ₹ 5ಸಾವಿರ ಹಾಗೂ ರಾಜ್ಯ ಸರ್ಕಾರ ₹ 5 ಸಾವಿರ ಒಟ್ಟು ₹ 10 ಸಾವಿರ ನೆರವು ನೀಡಬೇಕು. ಸ್ಪರ್ಧಾರ್ಥಿಗಳು ಇರುವ ಭಾಗದಲ್ಲಿ ‘ಇಂದಿರಾ ಕ್ಯಾಂಟೀನ್’ ಆರಂಭಿಸಬೇಕು’ ಎಂದು ಒತ್ತಾಯಿಸಿದರು.

ಅಕ್ಸಾ ಅಧ್ಯಕ್ಷ ಕಾಂತಕುಮಾರ್ ಮಾತನಾಡಿ, ಉದ್ಯೋಗಾಕಾಂಕ್ಷಿಗಳ ಹೋರಾಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಅಧಿಸೂಚನೆ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.

ಶ್ರೀಶೈಲ ತೇಲಿ, ಸಿದ್ಧು, ಗುರು ಬಸವ, ಚಾಣಕ್ಯ, ಚಂದು, ನಾಗರಾಜ್ ಸುದ್ದಿಗೋಷ್ಠಿಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-24-708198354

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.