ನಾಯಕನಹಟ್ಟಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ರಾಜ್ಯಮಟ್ಟದ ಪದಗ್ರಹಣ ಕಾರ್ಯಕ್ರಮ ಏ. 26ರಂದು ಧಾರವಾಡದ ವಿದ್ಯಾವರ್ಧಕ ಸಂಘದ ಪಾಟೀಲ್ ಪುಟ್ಟಪ್ಪ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಚೌಳೂರು ಲೋಕೇಶ್ ಹೇಳಿದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು ಯಾವುದೇ ಸಂಘಟನೆಗೆ ಪರ್ಯಾಯವಲ್ಲ. ಎಲ್ಲ ಕನ್ನಡಪರ ಸಂಘಟನೆಗಳೊಂದಿಗೆ ಬಾಂಧವ್ಯವನ್ನು ಸಾಧಿಸಿ ನೌಕರರಲ್ಲಿರುವ ಸಾಹಿತ್ಯ ಮತ್ತು ಸೃಜನಾತ್ಮಕ ಚಟುವಟಿಕೆಗಳಿಗೆ ವೇದಿಕೆಯನ್ನು ಒದಗಿಸುವುದು ಪ್ರಮುಖ ಉದ್ದೇಶವಾಗಿದೆ. ನೌಕರರು ಇತ್ತೀಚಿನ ದಿನಗಳಲ್ಲಿ ಒತ್ತಡದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಾನಸಿಕ ಒತ್ತಡದಿಂದ ಮುಕ್ತಿ ಸಿಗಬೇಕಾದರೆ, ನೌಕರರಲ್ಲಿ ಸುಪ್ತವಾಗಿರುವ ಕಲೆ, ಸಾಹಿತ್ಯವನ್ನು ಹೊರತರಬೇಕಿದೆ’ ಎಂದು ಹೇಳಿದರು.

ಹಾಗಾಗಿ ರಾಜ್ಯದಾದ್ಯಂತ ನೌಕರರನ್ನು ಒಗ್ಗೂಡಿಸಿ ಅವರ ಸಾಹಿತ್ಯದ ಆಸಕ್ತಿಗನುಗುಣ ವಾಗಿ ವೇದಿಕೆಯನ್ನು ಕಲ್ಪಿಸುವುದು ಸಂಘಟನೆಯ ಉದ್ದೇಶವಾಗಿದೆ. ಸಂಘಟನೆಯ ಪದಗ್ರಹಣ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ್ ಹೊರಟ್ಟಿ ಉದ್ಘಾಟಿಸಲಿದ್ದಾರೆ. ‘ಕಾಯಕರತ್ನ’ ಪ್ರಶಸ್ತಿಯನ್ನು ಸಚಿವ ಸಂತೋಷ್ಲಾಡ್ ವಿತರಿಸಲಿದ್ದಾರೆ. ಮಾಜಿ ಸಂಸದರಾದ ಐ.ಜಿ.ಸನದಿ, ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಷಡಕ್ಷರಿ ಸೇರಿ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸಂಘಟನೆಯ ಪ್ರಧಾನ ಕಾರ್ಯದರ್ಶಿ ವಿ.ಶ್ರೀನಿವಾಸ್ಮಳಲಿ, ಖಜಾಂಚಿ ಮಲ್ಲಿಕಾರ್ಜುನಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-44-1582967202

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.