ಧಾರವಾಡ: ಕೆಪಿಎಸ್ಸಿಯಲ್ಲಿ ನಡೆದಿರುವ ಅಕ್ರಮಗಳನ್ನು ಸಿಬಿಐ ತನಿಖೆಗೆ ವಹಿಸಬೇಕು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ತಕ್ಷಣ ನೇಮಕಾತಿ ಆರಂಭಿಸಬೇಕು ಎಂದು ಒತ್ತಾಯಿಸಲು ಪ್ರತಿಭಟನೆಗೆ ಸಜ್ಜಾಗಿದ್ದ ನಾಲ್ವರನ್ನು ಮಂಗಳವಾರ ಪೊಲೀಸರು ಮುಂಜಾಗ್ರತ ಕ್ರಮವಾಗಿ ವಶಕ್ಕೆ ಪಡೆದು, ಸಂಜೆ ಬಿಡುಗಡೆಗೊಳಿಸಿದರು.

ಜಯನಗರ ವೃತ್ತದ ಸಮೀಪ ನಾಗರಾಜ ಛಲವಾದಿ, ಚಾಣಕ್ಯ, ಲಕ್ಷ್ಮಿಕಾಂತ ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ಬಳಿ ಯಲ್ಲಪ್ಪ ಹೆಗಡೆ ಅವರನ್ನು ವಶಕ್ಕೆ ಪಡೆದು ಪೊಲೀಸ್ ಹೆಡ್ ಕ್ವಾರ್ಟ್ರಸ್ ಆವರಣಕ್ಕೆ ಕರೆದೊಯ್ದರು. ಸಂಜೆ 6 ಗಂಟೆ ಹೊತ್ತಿಗೆ ಬಿಡುಗಡೆಗೊಳಿಸಿದರು.

ಪ್ರತಿಭಟನೆಗೆ ಸಜ್ಜಾಗಿದ್ದವರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾಗಿತ್ತು ಎಂದು ವಿದ್ಯಾಗಿರಿ ಠಾಣೆ ಪೊಲೀಸ್ ಅಧಿಕಾರಿಯೊಬ್ಬರು ‘ಪ್ರಜಾವಾಣಿ‘ಗೆ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-24-75403121

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.