ಧಾರವಾಡ: ‘ಕಾರ್ಮಿಕರ ಹೋರಾಟಗಳಿಗೆ ಮೇ ದಿನದ ತ್ಯಾಗ, ಬಲಿದಾನಗಳು ಸ್ಪೂರ್ತಿಯಾಗಬೇಕು. ಹೋರಾಟದ ಮೂಲಕ ಸೌಲಭ್ಯ ಪಡೆದುಕೊಳ್ಳಬೇಕು’ ಎಂದು ಎಐಯುಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ಗಂಗಾಧರ ಬಡಿಗೇರ ಹೇಳಿದರು.

ನಗರದ ಸಾಹಿತ್ಯ ಭವನದಲ್ಲಿ ಎಐಯುಟಿಯುಸಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ನಡೆದ ಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿದರು.

‘ಗುತ್ತಿಗೆ, ಹೊರಗುತ್ತಿಗೆ ಪದ್ಧತಿ ಹೆಸರಲ್ಲಿ ಕನಿಷ್ಠ ವೇತನ, ಭವಿಷ್ಯ ನಿಧಿ, ಇಎಸ್ಐ, ರಜೆ, ಸೇವಾಭದ್ರತೆ ಮೊದಲಾದ ಸೌಲಭ್ಯಗಳು ಕಾರ್ಮಿಕರಿಗೆ ಸಿಗುತ್ತಿಲ್ಲ. ಐದು ವರ್ಷಗಳಿಗೊಮ್ಮೆ ಕನಿಷ್ಠ ವೇತನವನ್ನು ಪರಿಷ್ಕರಿಸಿ, ವ್ಯವಸ್ಥಿತವಾಗಿ ಜಾರಿಗೊಳಿಸಬೇಕು. ಉದ್ಯೋಗ ಭದ್ರತೆ ಕಲ್ಪಿಸಬೇಕು. ಅವರ ಹಕ್ಕುಗಳನ್ನು ಸರ್ಕಾರ ಹತ್ತಿಕ್ಕಬಾರದು’ ಎಂದು ಆಗ್ರಹಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಭುವನಾ ಬಳ್ಳಾರಿ ಮಾತನಾಡಿದರು.

ಕಾರ್ಯಕ್ರಮಕ್ಕೂ ಮುನ್ನ ಕಡಪಾ ಮೈದಾನದಿಂದ ಸಾಹಿತ್ಯ ಭವನದವರೆಗೆ ಮೆರವಣಿಗೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-24-1710357483

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.